spot_img

ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನದ ಉದ್ಘಾಟನೆ.

Date:

ನಿಟ್ಟೆ : ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉದ್ಘಾಟನಾ ನುಡಿಗಳನ್ನಾಡಿದ ಶ್ರೀ ದೇವಿಪ್ರಸಾದ್ ಶೆಟ್ಟಿ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವು ವಿದ್ಯಾರ್ಥಿಗಳಲ್ಲಿನ ಹೊಸತನದ ಹುಡುಕಾಟದ ಪುಟ್ಟ ಹೆಜ್ಜೆ ,ಏಕೆಂದರೆ ಈ ತಲೆಮಾರಿನ ವಿದ್ಯಾರ್ಥಿಗಳಲ್ಲಿ ಮತ್ತು ಯುವಜನರಲ್ಲಿ ದೇಶವನ್ನು ಪುನರ್ ನಿರ್ಮಿಸುವ ಜವಬ್ದಾರಿ ಇದೆ. ಪುನರ್ ನಿರ್ಮಿಸುವುದು ಅಂದರೆ ಸ್ವಾತಂತ್ರ್ಯ ಪೂರ್ವದ ಹೋರಾಟವಲ್ಲ ಬದಲಿಗೆ ಕರ್ತೃತ್ವ ಶಕ್ತಿಯ ಮೂಲಕ ಮರು ನಿರ್ಮಾಣ ಹಾಗಾಗಿ ನಮ್ಮ ನೆಲೆಯಲ್ಲಿ ಸಣ್ಣ ಕೆಲಸಗಳ ಮೂಲಕ ಯುವಜನಾಂಗ ಈ ದೇಶಕ್ಕಾಗಿ ಬದುಕಬೇಕು, ಅದಕ್ಕೆ ಪೂರಕ ಶಿಕ್ಷಣ ಸಿಗುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀ ದಿನೇಶ್ ಎಂ ಕೊಡವೂರು ಮಾತನಾಡಿ ವಿದ್ಯಾರ್ಥಿಗಳು ನಿರ್ಧಿಷ್ಟವಾದ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವತ್ತರಾಗಬೇಕು, ಅಂಕ ಗಳಿಕೆಗೆ ಸೀಮಿತವಾಗದ ಕಲಿಕೆಗೆ ನಾವು ಗಮನ ಕೊಡುತ್ತ ಸಮಗ್ರ ಅಭ್ಯೂದಯದ ಕಡೆಗೆ ಗಮನಕೊಡಬೇಕು. ಪರೀಕ್ಷೆಯ ಅಂಕಗಳು ವಿದ್ಯಾರ್ಥಿಯ ಕಾರ್ಯಕ್ಷಮತೆ, ಶೃದ್ಧೆ, ಏಕಾಗ್ರತೆಗಳನ್ನು ಪ್ರತಿನಿಧಿಸುತ್ತದೆ . ಆದರೆ ಅಂಕಗಳೇ ಒಬ್ಬ ವ್ಯಕ್ತಿಯನ್ನು ಅಳೆಯುವ ಅಂತಿಮ ಮಾನದಂಡವಲ್ಲ ಹಾಗಾಗಿ ಕೌಶಲ್ಯ, ದೇಶಭಕ್ತಿ, ಸಾಮಜಿಕ ಜವಬ್ದಾರಿಗಳ ಕಡೆಗೂ ಗಮನ ಕೊಡಬೇಕು ಹಾಗೂ ಪ್ರತಿಯೊಬ್ಬರೂ ನಮ್ಮ ದೇಶ, ನಮ್ಮ ಸಮಾಜ ಎನ್ನುವ ಅಭಿಮಾನವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ವೀಣಾ ಕುಮಾರಿ ಬಿ.ಕೆ ಮಾತನಾಡಿ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವು ನಮ್ಮ ವಿದ್ಯಾರ್ಥಿಗಳಲ್ಲಿನ ಪ್ರಾಯೋಗಿಕ ಕೌಶಲ್ಯವನ್ನು ಬಿಂಬಿಸುವುದಾಗಿದೆ, ಈ ಮೂಲಕ ತರಗತಿಗಳ ಪಡೆದ ಜ್ಞಾನವನ್ನು ಹೇಗೆ ಜೀವನದಲ್ಲಿ ಅಳವಡಿಸುತ್ತಾರೆ ಎನ್ನುವುದನ್ನು ತೋರಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು. ಹಾಗೆಯೇ ಈ ರೀತಿಯ ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹೊಸ ರೀತಿಯ ಆಲೋಚನೆಗಳಿಗೆ ಪ್ರಚೋದಿಸುತ್ತದೆ, ಹಾಗಾಗಿ ನಮ್ಮ ಶಿಕ್ಷಣ ಸಂಸ್ಥೆ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. ಎರಡು ದಿನಗಳ ಈ ಪ್ರದರ್ಶನದಲ್ಲಿ ಉಡುಪಿ ಜಿಲ್ಲೆಯ ಸುಮಾರು 20 ಪದವಿ ಪೂರ್ವ ಕಾಲೇಜುಗಳ 1750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪ್ರದರ್ಶನ ವೀಕ್ಷಣೆಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಐಕ್ಯೂಎಸಿ ಸಂಯೋಜಕರಾದ ಶ್ರೀ ಪ್ರಕಾಶ್ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ನಿಶ್ಮಿತಾ ವಂದಿಸಿದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸೆಪ್ಟೆಂಬರ್ 12 ಕಾರ್ಕಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ.

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೂಗಿನ ಹತ್ತಿರದ ಪಿಂಪಲ್ ಒಡೆಯುವ ಮೊದಲು ಯೋಚಿಸಿ: ಮೆದುಳಿನ ಸೋಂಕಿನ ಅಪಾಯಕ್ಕೆ ಸಿಲುಕಿಸುವ ಕರಾಳ ಸತ್ಯ!

ಮೊಡವೆಗಳನ್ನು ಒಡೆದರೆ ಅಥವಾ ಚಿವುಟಿದರೆ ಗಂಭೀರ ಸೋಂಕು ಉಂಟಾಗುವ ಸಾಧ್ಯತೆ ಇದೆ ಎಂದು ಚರ್ಮರೋಗ ತಜ್ಞರು ಎಚ್ಚರಿಕೆ ನೀಡುತ್ತಾರೆ.

ಉಡುಪಿ ಡಿಸ್ಟಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾಗಿ ಆಯ್ಕೆ

ಉಡುಪಿ ಡಿಸ್ಟಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ (ರಿ.) ಉಡುಪಿ ಇದರ ನೂತನ ಅಧ್ಯಕ್ಷರಾಗಿ ಶ್ರೀಯುತ ಸಂತೋಷ್ ಕುಮಾರ್ ಮೂಡಬಿದ್ರಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.