
ಹಿರಿಯಡ್ಕ : ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿಯ ಪದವಿ ಪೂರ್ವ ವಿಭಾಗದಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ 12 ವರ್ಷ ಕರ್ತವ್ಯ ನಿರ್ವಹಿಸಿ, ಕಾಲೇಜು ಶಿಕ್ಷಣ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕಿ ಶ್ರೀಮತಿ ನಳಿನಾ ದೇವಿ ಎಂ ಆರ್ , ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಮಂಜುನಾಥ್ ಭಟ್ ಅಧ್ಯಕ್ಷತೆ ವಹಿಸಿದ್ದರು.
ಡಾ. ಶ್ರೀಮತಿ ಪೂರ್ಣಿಮಾ ಕೆ ಸಂಸ್ಥೆಯಲ್ಲಿ ತಮ್ಮ 12 ವರ್ಷದ ವೃತ್ತಿ ಜೀವನದ ಅನುಭವಗಳನ್ನು ನೆನಪಿಸಿಕೊಂಡು ವಿದ್ಯಾರ್ಥಿಗಳಿಗೆ ಹಿತವಚನ ಬೋಧಿಸಿದರು. ವಿದ್ಯಾರ್ಥಿ ನಾಯಕಿ ತ್ರಿಶಾ , ನಾಯಕ ಆಯುಷ್ ನಾಯಕ್ ಮತ್ತವರ ತಂಡ ಕಾರ್ಯಕ್ರಮವನ್ನು ಉಪನ್ಯಾಸಕರಾದ ಶ್ರೀ ದೇವದಾಸ ಪ್ರಭು ಅವರ ಮಾರ್ಗದರ್ಶನದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಕಳೆದ ಸಾಲಿನಲ್ಲಿ ಗೌರವ ಉಪನ್ಯಾಸಕಿಯರಾಗಿ ಕರ್ತವ್ಯ ನಿರ್ವಹಿಸಿದ ಶ್ರೀಮತಿ ಚೈತ್ರ ಮತ್ತು ಕುಮಾರಿ ನಿಶ್ಚಿತ ಇವರನ್ನೂ ಸಹ ಸನ್ಮಾನಿಸಲಾಯಿತು.