
ನವದೆಹಲಿ: ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಅಥವಾ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುವುದರಿಂದ ರಕ್ತದೊತ್ತಡ (BP) ಹೆಚ್ಚಾಗುವ ಸಾಧ್ಯತೆ ಇದೆ ಎಂಬ ವಿಷಯವನ್ನು ಅಧ್ಯಯನವೊಂದು ಬಹಿರಂಗಪಡಿಸಿದೆ.
ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಪ್ಲಾಸ್ಟಿಕ್ ಬಾಟಲ್‌ನಲ್ಲಿನ ಮೈಕ್ರೋಪ್ಲಾಸ್ಟಿಕ್‌ಗಳು ರಕ್ತದೊತ್ತಡವನ್ನು ಹೆಚ್ಚಿಸುತ್ತವೆ. ಆಸ್ಟ್ರಿಯಾದ ಡ್ಯಾನ್ಯೂಬ್ ಪ್ರೈವೇಟ್ ಯೂನಿವರ್ಸಿಟಿಯ ಮೆಡಿಸಿನ್ ವಿಭಾಗ ನಡೆಸಿದ ಅಧ್ಯಯನವು ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದೆ.
ಈ ಮೈಕ್ರೋಪ್ಲಾಸ್ಟಿಕ್‌ಗಳು ದೇಹದ ರಕ್ತಪ್ರವಾಹವನ್ನು ಪ್ರವೇಶಿಸುವುದರಿಂದ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ, ಹಾರ್ಮೋನ್ ಅಸಮತೋಲನ ಹಾಗೂ ಕ್ಯಾನ್ಸರ್‌ಗೆ ಕಾರಣವಾಗುವ ಅಪಾಯವಿದೆ. ಇದನ್ನು ತಡೆಯಲು ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಪ್ಯಾಕ್ ಮಾಡಿದ ಪಾನೀಯಗಳ ಸೇವನೆ ತಪ್ಪಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಅಧ್ಯಯನದ ಪ್ರಕಾರ, ನೀರನ್ನು ಕುದಿಸಿ ಫಿಲ್ಟರ್ ಮಾಡುವುದರಿಂದ ಮೈಕ್ರೋಪ್ಲಾಸ್ಟಿಕ್ ಮತ್ತು ನ್ಯಾನೋಪ್ಲಾಸ್ಟಿಕ್‌ಗಳ ಪ್ರಮಾಣವನ್ನು ಶೇಕಡಾ 90ರಷ್ಟು ಕಡಿಮೆ ಮಾಡಬಹುದು.