108 ಆ್ಯಂಬುಲೆನ್ಸ್‌ಗೆ ಸುಳ್ಳು ಕರೆ ಮಾಡಿ ಪೊಲೀಸರಿಗೂ ಸವಾಲು ಹಾಕಿದ ಕುಡುಕ !

Date:

spot_img

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಗಲಾಟೆ ನಡೆದಿದೆ, ನನಗೆ ತುಂಬಾ ಪೆಟ್ಟಾಗಿದೆ ಎಂದು 108 ಆ್ಯಂಬುಲೆನ್ಸ್‌ಗೆ ಕರೆ ಮಾಡಿದ ಕುಡುಕನೊಬ್ಬ ಗೊಂದಲ ಸೃಷ್ಟಿಸಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಬಾಳೆಹೊನ್ನೂರಿನ 108 ಆ್ಯಂಬುಲೆನ್ಸ್‌ಗೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಶೃಂಗೇರಿಯಿಂದ ಕರೆ ಮಾಡಿ “ನನಗೆ ಭಾರಿ ಪೆಟ್ಟಾಗಿದೆ, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ” ಎಂದು ಕೇಳಿದ್ದಾನೆ. 40 ಕಿಮೀ ದೂರದಿಂದ ಬಂದ ಆ್ಯಂಬುಲೆನ್ಸ್ ಚಾಲಕ ಸ್ಥಳಕ್ಕೆ ತಲುಪಿದಾಗ, ಕುಡುಕ “ನನಗೇನು ಆಗಿಲ್ಲ, ನಿಮಗೆ ಸಾಧ್ಯವಾದರೆ ನನ್ನನ್ನು ಹಿಡಿಯಿರಿ!” ಎಂದು ಸವಾಲು ಹಾಕಿದ್ದಾನೆ.

ಅವನ ವರ್ತನೆ ನೋಡಿದ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೆ ಕೂಡಾ “ನನ್ನನ್ನು ಹಿಡಿಯಬಹುದು ಅಂದ್ರೆ ಹಿಡಿದು ತೋರಿಸಿ!” ಎಂದು ಸವಾಲು ಹಾಕಿದ ಕುಡುಕನನ್ನು ವಶಕ್ಕೆ ಪಡೆಯಲು ಅವರು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಸ್ಥಳೀಯರ ಸಹಾಯದಿಂದ ಅವನನ್ನು ಹಿಡಿದು ಪೊಲೀಸರು ಕೊಂಡೊಯ್ದಿದ್ದಾರೆ. ಅಷ್ಟರಲ್ಲೇ ಆತ “ತಪ್ಪಾಯ್ತು ಸರ್, ಬಿಟ್ಟು ಬಿಡಿ ಸರ್!” ಎಂದು ಬೇಡಿಕೊಳ್ಳಲು ಶುರುಮಾಡಿದ್ದಾನೆ.

ಈ ಅವಾಂತರಕ್ಕೆ ಬಾಳೆಹೊನ್ನೂರಿನಿಂದ 108 ಆ್ಯಂಬುಲೆನ್ಸ್ ಚಾಲಕ ನಿರರ್ಥಕವಾಗಿ 40 ಕಿಮೀ ದೂರ ಪ್ರಯಾಣ ಮಾಡಬೇಕಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ