ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್

Date:

spot_img

ಹುಬ್ಬಳ್ಳಿ : ಐದು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಯತ್ನಿಸಿದಾಗ ಆತ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದ ಪರಿಣಾಮ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳದ ಕೆಳಸೇತುವೆ ಬಳಿ ನಡೆದಿದೆ.

ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತನು ವಿಜಯನಗರದಲ್ಲಿ ವಾಸವಾಗಿದ್ದ ಬಾಲಕಿಯನ್ನು ತಿಂಡಿ ತಿನಿಸು ನೀಡುವುದಾಗಿ ಹೇಳಿ ಶೆಡ್‌ವೊಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಕೊನೆಗೆ ಬಾಲಕಿಯನ್ನು ಹತ್ಯೆಗೈದಿದ್ದಾನೆ. ಸ್ಥಳೀಯರು ಶವ ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗೆ ಸುತ್ತುವರಿದ ಪೊಲೀಸರು, ಆತನನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲೇ ಆತ ಹಲ್ಲೆಗೆ ಮುಂದಾದ ಕಾರಣ, ಪೊಲೀಸರು ಗುಂಡು ಹಾರಿಸಿದ್ದಾರೆ.

ಗುಂಡುಗಳು ಆರೋಪಿಯ ಎದೆ ಮತ್ತು ಕಾಲಿಗೆ ತಗುಲಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಅಶೋಕ್ ನಗರದ ಪೊಲೀಸ್ ಠಾಣೆ ಮುಂದೆ ನೂರಾರು ಜನರು ಪ್ರತಿಭಟನೆ ನಡೆಸಿದ್ದರು. ಪೊಲೀಸರ ಕಾರ್ಯಚಟುವಟಿಕೆಗೆ ಸಾರ್ವಜನಿಕರಿಂದ ಹರ್ಷೋದ್ಗಾರ ವ್ಯಕ್ತವಾಗಿದೆ. ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಸಲೀಂ ಅಹ್ಮದ್ ಭೇಟಿ ನೀಡಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.