spot_img

ಸಹಕಾರ ತತ್ವದಡಿ ಪರಿಸರ ಸಂರಕ್ಷಣೆ: ಮಲ್ಪೆಯಲ್ಲಿ ಯಶ್‌ಪಾಲ್ ಸುವರ್ಣರಿಂದ ಶ್ಲಾಘನೆ

Date:

spot_img

ಮಲ್ಪೆ : ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘ (ನಿ.) ಮತ್ತು ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರದ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ‘ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪದ’ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, “ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘವು ಸಹಕಾರ ತತ್ವದಡಿಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇದರ ಜೊತೆಗೆ, ವನಮಹೋತ್ಸವದಂತಹ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅತ್ಯಂತ ಸ್ತುತ್ಯಾರ್ಹ. ಜ್ಞಾನ ಜ್ಯೋತಿ ಭಜನಾ ಮಂದಿರವು ತನ್ನ ಸುವರ್ಣ ಮಹೋತ್ಸವ ಆಚರಣೆಯನ್ನು ಸಹಕಾರಿ ಸಂಘಗಳ ಸಹಭಾಗಿತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮಗಳ ಮೂಲಕ ನಡೆಸುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ” ಎಂದು ಪ್ರಶಂಸಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಗೀತಾ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸುವರ್ಣ, ಜ್ಞಾನ ಜ್ಯೋತಿ ಭಜನಾ ಮಂದಿರದ ಶ್ರೀ ಪಾಂಡುರಂಗ ಮಲ್ಪೆ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷೆ ಶ್ರೀಮತಿ ರಾಧಾ ಸುವರ್ಣ, ನಿರ್ದೇಶಕರಾದ ಶ್ರೀಮತಿ ಪೂರ್ಣಿಮ ಪುತ್ರನ್, ಶ್ರೀಮತಿ ಯೋಗಿತಾ ಸುವರ್ಣ, ಕಾರ್ಯದರ್ಶಿ ಶ್ರೀಮತಿ ಮಂಗಳ ತಿಲಕ್ ಹಾಗೂ ಮಹಿಳಾ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ಇಬ್ಬರಿಗೆ ಗಾಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹೆಬ್ರಿಯ ಮುಟ್ಲುಪಾಡಿಗೆ ಲಗ್ಗೆ ಇಟ್ಟ ಒಂಟಿ ಸಲಗ, ಕಂಗು-ಬಾಳೆ ತೋಟ ಧ್ವಂಸ!

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮುಟ್ಲುಪಾಡಿಯಲ್ಲಿ ಇದೀಗ ಆನೆಯ ಹಾವಳಿ ಶುರುವಾಗಿದೆ.

ಜಾಗತಿಕ AI ರೇಸ್‌ನಲ್ಲಿ ಸ್ವಿಟ್ಜರ್ಲೆಂಡ್: ಸಂಪೂರ್ಣ ಮುಕ್ತ-ಮೂಲ, ಬಹುಭಾಷಾ LLM ಬಿಡುಗಡೆಗೆ ಸಜ್ಜು

ಕೃತಕ ಬುದ್ಧಿಮತ್ತೆ (AI) ಪ್ರಾಬಲ್ಯಕ್ಕಾಗಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಅಮೆರಿಕ ಮತ್ತು ಚೀನಾಗಳ ನಡುವಿನ ಪೈಪೋಟಿ ಮುಂಚೂಣಿಯಲ್ಲಿದ್ದರೂ, ಇದೀಗ ಸ್ವಿಟ್ಜರ್ಲೆಂಡ್ ಕೂಡ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮುತ್ತಿದೆ.