
ರಾಜ್ಯಮಟ್ಟದ ಅಬಾಕಸ್ ಮತ್ತು ವೇದಗಣಿತ ಸ್ಪರ್ಧೆಯು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇಲ್ಲಿ ನಡೆಯಿತು ಈ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಒಂದು ಸಾವಿರದ ನೂರು ವಿದ್ಯಾರ್ಥಿಗಳು ಭಾಗವಹಿಸಿದ್ದು ಇವರಲ್ಲಿ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿನ ವಿದ್ಯಾರ್ಥಿಗಳಾದ ಅಪೇಕ್ಷ ಕಾಮತ್ ಮನ್ವಿತ್ ಜೋಶಿ ಮತ್ತು ಸಮೃದ್ಧಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಜಾನನ ಮರಾಠೆ ಮತ್ತು ಸದಸ್ಯರು ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ನಾಗಭೂಷಣ ಮರಾಠೆ ಮತ್ತು ಸದಸ್ಯರು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಈ ಸ್ಪರ್ಧೆಗೆ ಸಹಕರಿಸಿದ ಅಬಾಕಸ್ ಸಂಸ್ಥೆಯ ಗುರುರಾಜ್ ಹೆಗ್ಡೆ ಮತ್ತು ಲಕ್ಷ್ಮಿ ಹೆಗ್ಡೆ ಇವರಿಗೆ ಶಾಲಾ ಪರವಾಗಿ ಧನ್ಯವಾದವನ್ನು ಅರ್ಪಿಸಲಾಯಿತು.