
ಬೆಂಗಳೂರು, ಮಾರ್ಚ್. 21: ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಹೋಟೆಲ್ನಲ್ಲಿ ಶಾಕ್! ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾದ ಘಟನೆ ಬೆಳ್ಳಳ್ಳಿಯಲ್ಲಿ ನಡೆದಿದೆ.
ಅಬ್ದುಲ್ ರೆಹಮಾನ್ ಎಂಬಾತ ಹೋಟೆಲ್ ಸಪ್ಲೈಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಹೋಟೆಲ್ ಸಿಬ್ಬಂದಿ ಆಧಾರ್ ಕಾರ್ಡ್ ಕೇಳಿದಾಗ ಎರಡು ದಿನಗಳು ಕಳೆದರೂ ಒದಗಿಸದ ಕಾರಣ, ಅನುಮಾನಗೊಂಡ ಸಿಬ್ಬಂದಿ ಬ್ಯಾಗ್ ಪರಿಶೀಲಿಸಿದಾಗ ಗ್ರೆನೇಡ್ ಪತ್ತೆಯಾಗಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರೆಹಮಾನ್ ಮತ್ತು ಸ್ಫೋಟಕವನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆಯ ಬೆನ್ನಲ್ಲೇ ರೆಹಮಾನ್ನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ವಶಪಡಿಸಿಕೊಂಡ ಹ್ಯಾಂಡ್ ಗ್ರೆನೇಡ್ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಗೆ ರವಾನಿಸಿ ತನಿಖೆ ನಡೆಸಲಾಗುತ್ತಿದೆ.