
ಮೂಡಿಗೆರೆ : ಅಪರಿಚಿತ ವಾಹನದ ಡಿಕ್ಕಿಯಿಂದ 5 ದನಗಳು ಸ್ಥಳದಲ್ಲೇ ಸಾವನ್ನಪ್ಪಿ, 7 ದನಗಳು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ-ಹೆಬ್ಬರಿಗೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

ದುರಂತದ ವಿವರ
ರಸ್ತೆಯಲ್ಲಿ ಸಂಚರಿಸುತ್ತಿದ್ದ ಸುಮಾರು 12 ದನಗಳ ಗುಂಪಿಗೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಐದು ದನಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಏಳು ದನಗಳು ಗಂಭೀರ ಗಾಯಗೊಂಡಿವೆ. ಘಟನೆಯ ನಂತರ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.