spot_img

ಕಾರ್ಕಳ-ಪಡುಬಿದ್ರೆ ರಸ್ತೆಯಲ್ಲಿ ಭೀಕರ ಅಪಘಾತ: ರಿಕ್ಷಾ-ಬಸ್ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

Date:

spot_img

ಕಾರ್ಕಳ : ಕಾರ್ಕಳ-ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ವೆ ಕಣಜಾರ್ ಕಟ್ಟೆ ಬಳಿ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಕಾರ್ಕಳದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಆಟೋರಿಕ್ಷಾ ನಡುವೆ ಮುಂಜಾನೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾದಲ್ಲಿದ್ದ ವ್ಯಕ್ತಿ ಘಟನಾ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯ ನಂತರ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಪಘಾತದ ಪರಿಣಾಮವಾಗಿ ಬಸ್ ಹಾಗೂ ರಿಕ್ಷಾದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯ ಕುರಿತು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪೊಲೀಸ್ ಅಧಿಕಾರಿಯ ಆತ್ಮಹತ್ಯೆ ಮತ್ತು ಧರ್ಮಸ್ಥಳ ಎಸ್ಐಟಿ ತನಿಖೆಗೆ ಸಂಬಂಧ ಕಲ್ಪಿಸಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ದೂರು ದಾಖಲು!

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಉಪನಿರೀಕ್ಷಕರೊಬ್ಬರ ಫೋಟೋವನ್ನು ಬಳಸಿಕೊಂಡು, ಅವರ ಸಾವಿಗೆ ಮತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೂ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ನಾಲ್ಕು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಪ್ರಕರಣ: ಅಗೆದ ಸ್ಥಳದಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್‌ ರಹಸ್ಯ ಭೇದಿಸಿದ ಎಸ್‌ಐಟಿ!

ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್‌ ನಂಬರ್ 1ರಲ್ಲಿ ದೊರಕಿದ ಡೆಬಿಟ್‌ ಮತ್ತು ಪಾನ್‌ ಕಾರ್ಡ್‌ಗಳ ರಹಸ್ಯವನ್ನು ಎಸ್‌ಐಟಿ ಅಧಿಕಾರಿಗಳು ಭೇದಿಸಿದ್ದಾರೆ.

ಅಮಾನತು ರದ್ದಾದ IPS ಅಧಿಕಾರಿಗಳಿಗೆ ಸ್ಥಳ ನಿಯೋಜನೆ: ಬಿ.ದಯಾನಂದ್‌ಗೆ ಕಾರಾಗೃಹ ಇಲಾಖೆಯ ಮುಖ್ಯಸ್ಥರ ಸ್ಥಾನ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಆತ್ರಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ "ದ್ವಿ ಭಾಷಾ ಕಲಿಕಾ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಪರೀಕ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ಉದಯರಾಜ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು.