
ನೀರೆ : ಜಡ್ಡಿನಂಗಡಿ ಹೆದ್ದಾರಿಯಲ್ಲಿ ಕಾರು ಮತ್ತು ಸ್ಕೂಟರ್ ನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ನಾಡಬೈಲು ನಿವಾಸಿ ರಮಾನಂದ ಶೆಟ್ಟಿಯವರ ಪುತ್ರ ರಾಜೇಶ್ ಶೆಟ್ಟಿ (ವಯಸ್ಸು 35) ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜೇಶ್ ಶೆಟ್ಟಿ ಬೈಲೂರಿಗೆ ಹೋಗುತ್ತಿದ್ದ ಸಮಯದಲ್ಲಿ ಜಡ್ಡಿನಂಗಡಿ ಬಳಿ ಅಪರಿಚಿತ ಕಾರೊಂದು ಅವರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯ ನಂತರ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ರಾಜೇಶ್ ಶೆಟ್ಟಿಯವರನ್ನು ಆಂಬುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

