ಹಾಡಹಗಲೇ ಕಾರ್ಕಳದಲ್ಲಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ!

Date:

spot_img

ಕಾರ್ಕಳ: ಫೆಬ್ರವರಿ 3ರ ಮಧ್ಯಾಹ್ನ ಕಾರ್ಕಳ ಶಿವತಿಕೆರೆಯ ನಡುಬೀದಿಯಲ್ಲೇ ನಡೆದ ಮಾರಣಾಂತಿಕ ಹಲ್ಲೆ ಜನರಲ್ಲಿ ಆತಂಕ ಮೂಡಿಸಿದೆ. ಜೋಡುರಸ್ತೆ ನಿವಾಸಿ ಮಹಮ್ಮದ್‌ ರಿಜ್ವಾನ್‌ ಅವರನ್ನು ಆತನ ಪತ್ನಿಯ ಅಣ್ಣ ಅಶ್ರಫ್‌ ರೆಂಜಾಳ ಕತ್ತಿಯಿಂದ ಕಡಿದು ತಲೆ, ಕುತ್ತಿಗೆ ಮತ್ತು ಕಾಲಿಗೆ ಗಂಭೀರ ಗಾಯಗೊಳಿಸಿದ್ದಾನೆ. ರಿಜ್ವಾನ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಶ್ರಫ್‌ ರಿಜ್ವಾನ್‌ ಅವರನ್ನು ಕಾರ್ಕಳ ಬೈಪಾಸ್‌ ರಸ್ತೆಯ ಶಿವತಿಕೆರೆಗೆ ಕರೆಸಿಕೊಂಡು, ಕಾರಿನಿಂದ ಇಳಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಗಾಯಾಳುವನ್ನು ಆಟೋದಲ್ಲಿ ಕುಳ್ಳಿರಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

ತಂಗಿಯ ಆತ್ಮಹತ್ಯೆ ಹಿನ್ನೆಲೆಯೇ ಹಲ್ಲೆ?
2017ರಲ್ಲಿ ಅಶ್ರಫ್‌ನ ತಂಗಿ ಮೈಮುನಾ, ಜೋಡುರಸ್ತೆಯ ಮಹಮ್ಮದ್‌ ರಿಜ್ವಾನ್‌ ಅವರನ್ನು ಮದುವೆಯಾಗಿದ್ದರು. ಆದರೆ ಗಂಡನ ಮನೆಯವರ ಹಿಂಸೆ ಮತ್ತು ಕಿರುಕುಳ ತಾಳಲಾರದೇ ಕಳೆದ ನವೆಂಬರ್ 28ರಂದು ಮೈಮುನಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಡಿಸೆಂಬರ್ 2ರಂದು ಅವರು ಮೃತಪಟ್ಟಿದ್ದರು.

ಮೈಮುನಾ ಸಾವಿಗೆ ಸಂಬಂಧಿಸಿ ಅತ್ತೆ ನೂರ್‌ಜಾನ್‌, ಮಾವ ಮೊಹಮ್ಮದ್‌ ಶರೀಪ್‌, ಸಿರಾಜ್‌, ಸಿರಾಜ್‌ನ ಹೆಂಡತಿ ರಫಾತ್‌, ಅಬ್ದುಲ್‌ ಖಾದರ್‌, ಮಜೀದ್‌, ಮೆಹರುನ್ನಿಸಾ ಮತ್ತು ದಿಲ್‌ಷಾದ್‌ ಎಂಬವರು ಮಾನಸಿಕ ಹಿಂಸೆ ನೀಡಿದ ಕುರಿತು ಮೈಮುನಾ ಅಕ್ಕ ರಶೀದಾ ಬಾನು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ