ಕಾವಲಕಟ್ಟೆ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ಆರ್‌ಟಿಸಿ ಬಸ್-ಸ್ಕೂಟರ್ ಡಿಕ್ಕಿ, ಸ್ಕೂಟರ್ ಸವಾರ ಸಾವು

Date:

spot_img

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಲಕಟ್ಟೆ ಬಳಿಯ ಎನ್.ಸಿ ರಸ್ತೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲ್ಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಧರ್ಮಸ್ಥಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ರಾಜೇಶ್‌ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ರಾಜೇಶ್‌ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ದಾರಿ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಾಜೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.