
ಹಿರ್ಗಾನ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಹಿರ್ಗಾನ ಇವರ ವತಿಯಿಂದ 14ನೇ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಮಾನಂದ ಭಟ್, ಲಕ್ಷ್ಮೀಪುರ ಇವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಆನಂದ ಪೂಜಾರಿ ಅವರು ವಹಿಸಿದ್ದರು. ಶ್ರೀಮತಿ ಸೌಮ್ಯ ಶೆಟ್ಟಿ, ಬೈಲೂರು ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನೀತಾ ಶೆಟ್ಟಿ, ಮತ್ತು ಹಿರ್ಗಾನ ವ್ಯ.ಸೇ.ಸ. ಸಂಘದ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಾಸು ಶೆಟ್ಟಿ ಅವರು ಎಲ್ಲ ಅತಿಥಿಗಳನ್ನು ಮತ್ತು ಭಕ್ತರನ್ನು ಸ್ವಾಗತಿಸಿದರು. ಸಂಜೀವ ಪೂಜಾರಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಕೊನೆಯಲ್ಲಿ ಧನ್ಯವಾದಗಳನ್ನು ಅರ್ಪಿಸಿದರು. ಈ ಕಾರ್ಯಕ್ರಮವು ಹಿರ್ಗಾನ ಗ್ರಾಮದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಹೆಚ್ಚಿಸಿತು.