spot_img

ಭ್ರೂಣ ಲಿಂಗ ಪತ್ತೆ: ಸರ್ಕಾರದ ಕಠಿಣ ಎಚ್ಚರಿಕೆ

Date:

ಉಡುಪಿ: ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವ ಅನೈತಿಕ ಕ್ರಿಯೆಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಘೋಷಿಸಿದ್ದಾರೆ. ಈ ಬಗ್ಗೆ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಡಾ. ಭಟ್, ಪಿ.ಸಿ.ಪಿ.ಡಿ.ಎನ್.ಟಿ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಒತ್ತಿಹೇಳಿದರು. ಭ್ರೂಣ ಲಿಂಗ ಪತ್ತೆ ಹೆಚ್ಚುವ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಸ್ಕ್ಯಾನಿಂಗ್ ಕೇಂದ್ರಗಳು ಸರ್ಕಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಅಪರಾಧದಿಂದಾಗಿ ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗುತ್ತದೆ ಮತ್ತು ಸಮಾಜದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಾ. ಭಟ್ ಎಚ್ಚರಿಕೆ ನೀಡಿದರು. ಇಂತಹ ಅನೈತಿಕ ಕ್ರಿಯೆಗಳಿಗೆ ಎಡೆಮಾಡಿಕೊಡಬಾರದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ 2024ರ ಏಪ್ರಿಲ್ ನಿಂದ ನವೆಂಬರ್ ವರೆಗೆ ಗಂಡು ಮತ್ತು ಹೆಣ್ಣು ಮಕ್ಕಳ ಲಿಂಗಾನುಪಾತ 966 ಆಗಿದೆ ಎಂದು ಡಾ. ಭಟ್ ತಿಳಿಸಿದರು. ಹೆಣ್ಣು ಮಕ್ಕಳ ಅನುಪಾತ ಕಡಿಮೆ ಇರುವ ಗ್ರಾಮಗಳಲ್ಲಿ ಸಾಮಾಜಿಕ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಶಾಲಾ ಎನ್.ಎಸ್.ಎಸ್ ವಿದ್ಯಾರ್ಥಿಗಳ ಮೂಲಕ ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಭ್ರೂಣಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ ಎಂಬ ಬಗ್ಗೆ ಎದ್ದುಕಾಣುವ ರೀತಿಯಲ್ಲಿ ಫಲಕಗಳನ್ನು ಪ್ರದರ್ಶಿಸಬೇಕು ಎಂದರು. ಅಲ್ಲದೆ, ಸರ್ಕಾರಿ ನಿಯಮಗಳಿಗೆ ಅನುಗುಣವಾಗಿ ರಿಜಿಸ್ಟರ್ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಒತ್ತಿಹೇಳಿದರು. 5 ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಎಫ್ ಫಾರ್ಮ್ ಮತ್ತು ಇತರ ದಾಖಲೆಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಕೇಳಿ ನೋಟೀಸ್ ನೀಡಲಾಗಿದೆ ಎಂದರು.

ಡಾ. ಪ್ರತಾಪ್ ಕುಮಾರ್, ಪಿ.ಸಿ & ಪಿ.ಎನ್.ಡಿ.ಟಿ ಸಮಿತಿಯ ಸದಸ್ಯರುಗಳು ಆಗಿಂದಾಗ್ಗೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು. ಹೊಸದಾಗಿ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ತೆರೆಯಲು ಅರ್ಜಿ ಸಲ್ಲಿಸಿದ್ದಲ್ಲಿ, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಮಾತ್ರ ಅನುಮತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಮಣಿಪಾಲ ಕೆ.ಎಂ.ಸಿ ಯ ಮಕ್ಕಳ ತಜ್ಞ ಡಾ. ಕಿರಣ ಹೆಬ್ಬಾರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಾಜ ಸೇವಕ ಡಾ. ಗಣೇಶ್ ಪೈ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೀಕ್ಷಿತಾ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಕೀಲ್ ಜಗದೀಶ್ 93 ದಿನಗಳ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ

 ವಿವಾದಾತ್ಮಕ ವಕೀಲ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಅವರು 93 ದಿನಗಳ ಕಾರಾಗೃಹ ವಾಸದ ನಂತರ ಜಾಮೀನು ಮಂಜೂರಾಗಿ ಬಿಡುಗಡೆಯಾಗಿದ್ದಾರೆ

ಫಾಲೋವರ್ಸ್ ಕುಸಿತದಿಂದ ಆತಂಕ… ಇನ್ಸ್ಟಾಗ್ರಾಮ್ ಸ್ಟಾರ್ ಮಿಶಾ ಆತ್ಮಹತ್ಯೆ!

ಇನ್ಸ್ಟಾಗ್ರಾಮ್ ಖ್ಯಾತಿ ಮತ್ತು ಯುವ ಕಂಟೆಂಟ್ ಕ್ರಿಯೇಟರ್ ಮಿಶಾ ಅಗ್ರವಾಲ್ (ವಯಸ್ಸು 24) ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಸೋಶಿಯಲ್ ಮೀಡಿಯಾದ 'ಫಾಲೋವರ್ಸ್ ಕುಸಿತ' ಕಾರಣವೆಂದು ಕುಟುಂಬವು ಬಹಿರಂಗಪಡಿಸಿದೆ

ದಿನ ವಿಶೇಷ – ಕಾರ್ಮಿಕ ದಿನ

1886 ರಲ್ಲಿ ಯುನೈಟೆಡ್ ಸ್ಟೇಟ್ಸ್ ನ ಅತ್ಯಂತ ಕೆಲಸದ ಒತ್ತಡದ ನಿಮಿತ್ತ ಕಾರ್ಮಿಕರು ಪ್ರತಿಭಟನೆಯನ್ನು ಮಾಡಿದರು

ಕಾರ್ಕಳ ಪೆರ್ವಾಜೆಯಲ್ಲಿ ಚಿರತೆಯ ಸಂಚಾರ : ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಮನವಿ

ಉಡುಪಿ ಜಿಲ್ಲೆಯ ಕಾರ್ಕಳದ ಪೆರ್ವಾಜೆ ಪ್ರದೇಶದಲ್ಲಿ ಗಂಗಾ ಪ್ಯಾರಡೈಸ್ ಬಳಿ ನಿನ್ನೆ ರಾತ್ರಿ ಸುಮಾರು 9.15ರ ಸುಮಾರಿಗೆ ಚಿರತೆಯೊಂದು ರಸ್ತೆಯಿಂದ ಕಾಡಿನತ್ತ ಹೋಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.