ದೇಶ ವಿರೋಧಿ ಪೋಸ್ಟ್ ಮಾಡಿದ ಮಂಗಳೂರು ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲು

Date:

spot_img

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ದೇಶ ವಿರೋಧಿ ಹಾಗೂ ಧರ್ಮ ನಿಂದನೆಯ ಶಬ್ದಗಳನ್ನು ಒಳಗೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಹಂಚಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯೂ ಇವರನ್ನು ಕೆಲಸದಿಂದ ವಜಾ ಮಾಡಿದೆ.

ಅಫೀಫ ಫಾತಿಮಾ ಎನ್ನುವ ವೈದ್ಯೆ ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ, “Help stinky Hindus behind me” ಮತ್ತು “Am I Indian – Yes, Do I hate India – Yes” ಎಂಬ ದೇಶಕ್ಕೆ ಧಕ್ಕೆ ತರುವ, ಧರ್ಮವನ್ನು ನಿಂದಿಸುವ ಪೋಸ್ಟ್ ಹಂಚಿದ್ದಾರೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ನಂತರ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದು, ಹಿಂದೂ ಸಂಘಟನೆಗಳೂ ತೀವ್ರ ವಿರೋಧ ವ್ಯಕ್ತಪಡಿಸಿದವು.

ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಗೆ ಹಲವು ಸಾರ್ವಜನಿಕರು ದೂರು ನೀಡಿದ್ದಾರೆ. ಪೊಲೀಸರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವೈದ್ಯೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟ್‌ ವಿವಾದದ ತೀವ್ರತೆಯನ್ನು ಮನಗಂಡ ಆಸ್ಪತ್ರೆಯ ಆಡಳಿತ ಮಂಡಳಿಯೂ ಕೂಡ ತಕ್ಷಣ ಕ್ರಮ ಕೈಗೊಂಡಿದ್ದು, ಅಫೀಫ ಫಾತಿಮಾವನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆಸ್ಪತ್ರೆಯ HR ವಿಭಾಗವೂ ತಾನು ದೂರು ದಾಖಲಿಸಿರುವುದಾಗಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.