ಯರ್ಲಪಾಡಿ ಗ್ರಾಮ ಪಂಚಾಯತ್‌ನಲ್ಲಿ ಪ್ರಥಮ ಹಂತದ ಗ್ರಾಮಸಭೆ: ಮಾಜಿ ಅಧ್ಯಕ್ಷರಿಗೆ, ವಿದ್ಯಾರ್ಥಿಗಳಿಗೆ ಸನ್ಮಾನ

Date:

spot_img

ಯರ್ಲಪಾಡಿ : ಯರ್ಲಪಾಡಿ ಗ್ರಾಮಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷರಾದ ಸುನಿಲ್ ಕುಮಾರ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಗ್ರಾಮಸಭಾ ನೋಡೆಲ್ ಅಧಿಕಾರಿ ಡಾ. ಚಂದ್ರಶೇಖರ್ ಸಾಲಿಮಠ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವಿವಿಧ ಇಲಾಖಾಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷರು, ಸರ್ವ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಲಾಖಾಧಿಕಾರಿಗಳಿಂದ ಮಾಹಿತಿ ಕಾರ್ಯಕ್ರಮ, ಚರ್ಚೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನಲ್ಲಿ ಇದುವರೆಗೆ ಕಾರ್ಯನಿರ್ವಹಿಸಿದ 9 ಮಂದಿ ಮಾಜಿ ಅಧ್ಯಕ್ಷರುಗಳನ್ನು ಗೌರವಿಸಲಾಯಿತು. ಶೈಕ್ಷಣಿಕ ಹಾಗೂ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಮತ್ತು SLRM ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು. ಸಭೆಯಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ಆರುಂಧತಿ ನಾಯಕ್ ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ಬಿಪಿ ಹಾಗೂ ಮಧುಮೇಹ ತಪಾಸಣೆ ಶಿಬಿರವನ್ನು ಕೂಡ ಆಯೋಜಿಸಲಾಗಿತ್ತು.

ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಪಂಚಾಯತ್ ಸದಸ್ಯೆ ಸುಮತಿ ಬಿ ಹೆಗ್ಡೆ ಸ್ವಾಗತಿಸಿದರು. ನೋಡೆಲ್ ಅಧಿಕಾರಿ ಪ್ರಾಸ್ತವಿಕ ಮಾತನಾಡಿದರು. ಸಿಬ್ಬಂದಿ ಕಾಂತ ಪೂಜಾರಿ ವರದಿ ಮಂಡಿಸಿದರು. ಗ್ರಾಮಪಂಚಾಯತ್ ಸದಸ್ಯ ಹರೀಶ್ ದೇವಾಡಿಗ ತಮ್ಮ ಅನಿಸಿಕೆ ಹಂಚಿಕೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಾಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯಗೊಂಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.