ಭದ್ರತೆ ದೃಷ್ಟಿಯಿಂದ ಮೀನುಗಾರರಿಗೆ ಗುಂಪುಗಳಲ್ಲಿ ಮೀನುಗಾರಿಕೆ ನಡೆಸಲು ಸೂಚನೆ ನೀಡಿದ ಮೀನುಗಾರಿಕಾ ಇಲಾಖೆ

Date:

spot_img

ಉಡುಪಿ: ಕರಾವಳಿ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ, ಸಮುದ್ರದಲ್ಲಿ ಮೀನುಗಾರರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕೆಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಸೂಚನೆ ನೀಡಿದ್ದಾರೆ. ಮೀನುಗಾರಿಕೆಗೆ ಹೊರಡುವಾಗ ಎರಡು ಅಥವಾ ಮೂರು ದೋಣಿಗಳ ಗುಂಪಿನಲ್ಲಿ ಸಾಗಬೇಕೆಂದು ಸೂಚನೆ ನೀಡಿದ್ದಾರೆ.

ಮಧ್ಯ ಸಮುದ್ರದಲ್ಲಿ ಮರಳು ದಂಡೆಗಳು ಅಥವಾ ಅಪರಿಚಿತ ದ್ವೀಪಗಳಲ್ಲಿ ಯಾವುದೇ ವ್ಯಕ್ತಿಗಳ ಚಲನವಲನ ಕಂಡು ಬಂದಲ್ಲಿ ತಕ್ಷಣವೇ ಇಲಾಖೆಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ. ಮೀನುಗಾರಿಕೆ ವೇಳೆ ಲಂಗರು ಹಾಕುವಾಗ ದೋಣಿಗಳ ನ್ಯಾವಿಗೇಶನ್ ದೀಪಗಳನ್ನು ಆನ್ ಮಾಡುವುದು ಕಡ್ಡಾಯ.

ಭದ್ರತಾ ಪಡೆಗಳ ತಪಾಸಣೆ ವೇಳೆ ಸಂಪೂರ್ಣ ಸಹಕಾರ ನೀಡಬೇಕು. ಜೊತೆಗೆ, ಕ್ಯೂಆರ್‌ ಕೋಡ್ ಪರವಾನಗಿ, ಆಧಾರ್ ಕಾರ್ಡ್, ನೋಂದಣಿ ಪ್ರಮಾಣ ಪತ್ರ, ಮೀನುಗಾರಿಕೆ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳನ್ನು ತಮ್ಮೊಂದಿಗೆ ಇಡುವಂತೆ ಸೂಚಿಸಲಾಗಿದೆ.

ಯಾವುದೇ ಅನುಮಾನಾಸ್ಪದ ಸಂದರ್ಭ ಎದುರಾದರೆ ಮೀನುಗಾರರು ಸಮುದ್ರಕ್ಕೆ ಇಳಿಯದೆ ಹಿಂದಿರುಗಬೇಕು ಎಂದು ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.