ಮಲ್ಪೆಯಲ್ಲಿ ವಿದೇಶಿ ಮೀನುಗಾರಿಕಾ ಬೋಟ್ ಪತ್ತೆ: ಓಮನ್‌ನಿಂದ ತಪ್ಪಿಸಿಕೊಂಡ ಮೂರು ತಮಿಳುನಾಡು ಮೀನುಗಾರರು

Date:

spot_img

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಸೈಂಟ್ ಮೇರಿಸ್ ದ್ವೀಪದ ಬಳಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದೆ. ಈ ಬೋಟ್‌ನಲ್ಲಿ ತಮಿಳುನಾಡು ಮೂಲದ ಮೂವರು ಮೀನುಗಾರರು ಸಿಕ್ಕಿದ್ದು, ಅವರು ತಮ್ಮ ಜೀವದ ಭಯದಿಂದ ಓಮನ್ ಹಾರ್ಬಾರ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.

ಈ ಮೀನುಗಾರರು ಓಮನ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದರು. ಆದರೆ ಬೋಟ್ ಮಾಲೀಕರು ಅವರಿಗೆ ವೇತನ ನೀಡದೆ, ಆಹಾರವೂ ಸರಿಯಾಗಿ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದುದರಿಂದ ಅವರು ದೇಶ ತೊರೆದು ಓಡಿಬಂದಿದ್ದಾರೆ. ಬೋಟ್ ಮಾಲೀಕರು ಅವರ ಪಾಸ್‌ಪೋರ್ಟ್ ವಶಕ್ಕೆ ಪಡೆದಿದ್ದರಿಂದ ಅವರು ಅಧಿಕೃತವಾಗಿ ಮರಳಲು ಸಾಧ್ಯವಾಗದೆ, ಸಮುದ್ರ ಮಾರ್ಗವಾಗಿ 4,000 ಕಿಲೋಮೀಟರ್ ಪ್ರಯಾಣಿಸಿ ಭಾರತೀಯ ಕರಾವಳಿಗೆ ತಲುಪಿದ್ದಾರೆ.

ಕೋಸ್ಟ್ ಗಾರ್ಡ್ ಮಾಹಿತಿಯಂತೆ, ಈ ಬೋಟ್ ಕಾರವಾರವನ್ನು ದಾಟಿ ಮಲ್ಪೆ ಕಡೆಗೆ ಬರುತ್ತಿತ್ತು. ಆದರೆ ಡೀಸೆಲ್ ಖಾಲಿಯಾಗಿದ್ದು, ಅವರಿಗೆ ಹಣವೂ ಇಲ್ಲದ ಕಾರಣ ಅಲ್ಲಿ ಪರದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಬೋಟ್ ಮತ್ತು ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಸ್ತುತ, ಪಾಸ್‌ಪೋರ್ಟ್ ಇಲ್ಲದೆ ವಿದೇಶಿ ಬೋಟ್ ಮೂಲಕ ಗಡಿ ದಾಟಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನುಳಿದ ತನಿಖೆ ಮುಂದುವರಿಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.