
ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ವನಮಹೋತ್ಸವ 2025’, ‘ಹಸಿರು ಪಥ’, ಮತ್ತು ‘ಕಲಬುರ್ಗಿ ಹಸಿರು ಹೆಜ್ಜೆ’ ಕಾರ್ಯಕ್ರಮಗಳ ಅಂಗವಾಗಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಬೋತಗಿ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಶಿಲ್ಪಾ ಅಲ್ಲದ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ. ಪ್ರಾಣೇಶ, ಡಾ. ಶಂಕರಪ್ಪ ಕಲಬುರ್ಗಿ, ಐ.ಕೆ. ಪಾಟೀಲ್ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದ ಗಣ್ಯರು, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ‘ಮನೆಗೊಂದು ಗಿಡ ನೆಡುವಂತೆ’ ಪ್ರೇರಣೆ ನೀಡಿದರು. ಕಾರ್ಯಕ್ರಮದ ಭಾಗವಾಗಿ ಪ್ರತಿಯೊಬ್ಬರಿಗೂ ಒಂದೊಂದು ಸಸಿಯನ್ನು ವಿತರಿಸಲಾಯಿತು.