80 ಬಡಗಬೆಟ್ಟು : ಭವ್ಯವಾಗಿ ಪುನರ್ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶ್ರೀ ಕ್ಷೇತ್ರ 80 ಬಡಗಬೆಟ್ಟು ಇದರ ಶಿಲಾನ್ಯಾಸ ಕಾರ್ಯಕ್ರಮವು ಇಂದು ಬೆಳ್ಳಿಗ್ಗೆ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ , ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಯರಾಜ್ ಹೆಗ್ಡೆ, ಆಡಳಿತ ಮೊಕ್ತೇಸರರಾದ ಅರುಣಾಚಲ ಹೆಗ್ಡೆ , ದಾನಿಗಳಾದ ಕರುಣಾಕರ ಶೆಟ್ಟಿ , ಶ್ರೀನಾಥ್ ಹೆಗ್ಡೆ, ಗರಡಿ ಅರ್ಚಕರು, ಆಡಳಿತ ಸಮಿತಿಯ ಸದಸ್ಯರು , ಜೀರ್ಣೋದ್ದಾರ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಹತ್ತು ಸಮಸ್ತರು ಉಪಸ್ಥಿತರಿದ್ದರು.