spot_img

ರಸ್ತೆ ಅಪಘಾತಕ್ಕೆ 1.5 ಲಕ್ಷ ರೂ.ವರೆಗೆ ಉಚಿತ ನಗದುರಹಿತ ಚಿಕಿತ್ಸೆ: ಕೇಂದ್ರ ಸರ್ಕಾರದ ಹೊಸ ಮಹತ್ವದ ಯೋಜನೆ

Date:

spot_img

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆಯ ಕೊರತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ, ಕೇಂದ್ರ ಸರಕಾರ ಮಹತ್ವದ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಅಪಘಾತದ ದಿನದಿಂದ ಆರಂಭಿಸಿ ಏಳು ದಿನಗಳವರೆಗೆ ₹1.5 ಲಕ್ಷ ಮಿತಿಯಲ್ಲಿ ನಗದುರಹಿತ ಚಿಕಿತ್ಸೆ ಲಭ್ಯವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ದೇಶದ ಯಾವುದೇ ರಸ್ತೆಯಲ್ಲಿ, ಯಾವುದೇ ರೀತಿಯ ವಾಹನದಿಂದ ಸಂಭವಿಸುವ ಅಪಘಾತಕ್ಕೂ ಈ ಯೋಜನೆ ಅನ್ವಯವಾಗಲಿದೆ. ಅಪಘಾತಕ್ಕೀಡಾದವರು ತಕ್ಷಣವೇ ಹತ್ತಿರದ ಆಯ್ದ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗೆ ಹೋಗಿ ಮುಂಗಡ ಹಣ ಪಾವತಿಸದೇ ತುರ್ತು ಚಿಕಿತ್ಸೆಯನ್ನು ಪಡೆಯಬಹುದು. ದಾಖಲಾಗುವಾಗ ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಗಾಯಗೊಂಡಿರುವ ವಾಹನ ಸವಾರರು, ಪ್ರಯಾಣಿಕರು ಅಥವಾ ಪಾದಚಾರಿಗಳು ಎಲ್ಲರೂ ಯೋಜನೆಯ ಲಾಭ ಪಡೆಯಬಹುದಾಗಿದೆ.

ಈ ಯೋಜನೆಯಡಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಔಷಧ, ಶಸ್ತ್ರಚಿಕಿತ್ಸೆ, ಐಸಿಯು ಸೌಲಭ್ಯಗಳು ಎಲ್ಲವೂ ಒಳಗೊಂಡಿವೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳು, ಎಫ್‌ಐಆರ್ ಪ್ರತಿಗಳು ಇಟ್ಟುಕೊಂಡರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯ ಎಂದು ಸಚಿವಾಲಯ ತಿಳಿಸಿದೆ.

ಈ ಯೋಜನೆಯ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಹೊತ್ತಿದ್ದು, ಪೊಲೀಸರ, ಆಸ್ಪತ್ರೆಗಳ ಹಾಗೂ ರಾಜ್ಯ ಆರೋಗ್ಯ ಸಂಸ್ಥೆಗಳ ಸಹಯೋಗದಿಂದ ಹಣವನ್ನು ನೇರವಾಗಿ ಆಸ್ಪತ್ರೆಗಳಿಗೆ ಪಾವತಿಸಲಾಗುವುದು. ಈ ಯೋಜನೆಯ ಸುಗಮ ಜಾರಿಗಾಗಿ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಹೇಳಿದೆ. 2024ರ ನವೆಂಬರ್‌ನಲ್ಲೇ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯಲ್ಲಾಪುರ ಸಮೀಪ ಭೀಕರ ರಸ್ತೆ ಅಪಘಾತ- ಕೆಎಸ್ಆರ್‌ಟಿಸಿ ಬಸ್-ಲಾರಿ ಡಿಕ್ಕಿ, ಮೂವರು ಬಲಿ

ಕೇರಳ ಮೂಲದ ಲಾರಿ, ಬಾಗಲಕೋಟೆ ಬಸ್ - ಯಲ್ಲಾಪುರ ಘಟ್ಟದಲ್ಲಿ ಸಂಭವಿಸಿದ ಭೀಕರ ಅಪಘಾತ

ಮನುಷ್ಯರಂತೆ ಯೋಚಿಸುವ ಏಜೆಂಟಿಕ್ Ai ನಿರ್ಮಿಸುತ್ತಿದೆ ಮೈಕ್ರೋಸಾಫ್ಟ್

ಕೀಬೋರ್ಡ್, ಮೌಸ್‌ಗಳಿಲ್ಲದ ಭವಿಷ್ಯದ ವಿಂಡೋಸ್ 2030

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.