spot_img

ಪ್ರಧಾನಿ ಮೋದಿ ಸಲಹೆಯಿಂದಲೇ ಬಿಹಾರದಲ್ಲಿ ಉಚಿತ ವಿದ್ಯುತ್: ನಿತೀಶ್ ಕುಮಾರ್ ಅಚ್ಚರಿ ಹೇಳಿಕೆ

Date:

spot_img

ಪಟ್ನಾ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಗೆ ಈಗ ಸ್ವತಃ ಮಿತ್ರಪಕ್ಷದ ಮುಖ್ಯಮಂತ್ರಿಯೊಬ್ಬರಿಂದಲೇ ಮುಜುಗರ ಎದುರಾಗಿದೆ. ಬಿಹಾರದಲ್ಲಿ ಪ್ರತಿ ತಿಂಗಳು 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸಲಹೆ ನೀಡಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಘೋಷಣೆ ಮಾಡಿದ್ದ ನಿತೀಶ್ ಕುಮಾರ್, ಆಗಸ್ಟ್ 1 ರಿಂದ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಗುರುವಾರ ಪ್ರಕಟಿಸಿದ್ದರು. ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ. “ರಾಜ್ಯದ ಜನರು ವಿದ್ಯುತ್‌ಗಾಗಿ ಹಣ ಪಾವತಿಸುವ ಅಗತ್ಯವಿಲ್ಲ. ಈ ಯೋಜನೆ ಜಾರಿಗೊಳಿಸಲು ಬೇಕಾಗಿರುವ ನೆರವನ್ನು ಪ್ರಧಾನಿ ಮೋದಿಯವರೇ ನೀಡಿದ್ದಾರೆ. ಅವರನ್ನು ನಾವು ಗೌರವಿಸುತ್ತೇವೆ. ಅವರ ಮಾರ್ಗದರ್ಶನದಲ್ಲೇ ನಾವು ಕೆಲಸ ಮಾಡುತ್ತೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಉಚಿತ ಕೊಡುಗೆಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ಎನ್‌ಡಿಎ ಹೇಳಿಕೊಂಡಿದ್ದರೂ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ‘200 ಯೂನಿಟ್ಸ್ ಉಚಿತ ವಿದ್ಯುತ್’ ಘೋಷಣೆ ಮಾಡುವ ಸಾಧ್ಯತೆಯಿದೆ. ಅದಕ್ಕೆ ಸೆಡ್ಡು ಹೊಡೆಯಲು ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೆಬ್ರಿಯ ಮುಟ್ಲುಪಾಡಿಗೆ ಲಗ್ಗೆ ಇಟ್ಟ ಒಂಟಿ ಸಲಗ, ಕಂಗು-ಬಾಳೆ ತೋಟ ಧ್ವಂಸ!

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮುಟ್ಲುಪಾಡಿಯಲ್ಲಿ ಇದೀಗ ಆನೆಯ ಹಾವಳಿ ಶುರುವಾಗಿದೆ.

ಜಾಗತಿಕ AI ರೇಸ್‌ನಲ್ಲಿ ಸ್ವಿಟ್ಜರ್ಲೆಂಡ್: ಸಂಪೂರ್ಣ ಮುಕ್ತ-ಮೂಲ, ಬಹುಭಾಷಾ LLM ಬಿಡುಗಡೆಗೆ ಸಜ್ಜು

ಕೃತಕ ಬುದ್ಧಿಮತ್ತೆ (AI) ಪ್ರಾಬಲ್ಯಕ್ಕಾಗಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಅಮೆರಿಕ ಮತ್ತು ಚೀನಾಗಳ ನಡುವಿನ ಪೈಪೋಟಿ ಮುಂಚೂಣಿಯಲ್ಲಿದ್ದರೂ, ಇದೀಗ ಸ್ವಿಟ್ಜರ್ಲೆಂಡ್ ಕೂಡ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮುತ್ತಿದೆ.

ಚಿಕ್ಕವನಿದ್ದಾಗಿನಿಂದಲೇ ಅಪರಾಧ: ಉದ್ಯಮಿಗಳಿಗೆ ವಂಚಿಸಿದ ರೋಶನ್ ಸಲ್ದಾನ್ಹಾ ಬಗ್ಗೆ ಸ್ಫೋಟಕ ಮಾಹಿತಿ

ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಶನ್ ಸಲ್ದಾನ್ಹಾ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಪೂಜ್ಯ ಪರ್ಯಾಯ ಶ್ರೀಪಾದರು ಗೀತಾಮಂದಿರದಲ್ಲಿ ಬಿಡುಗಡೆಗೊಳಿಸಿದರು.