
ಕಾರ್ಕಳ : ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನಾಳೆ, ಜುಲೈ 20, 2025 ರ ಆದಿತ್ಯವಾರ, ಕಾರ್ಕಳದ ಕಲಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಶಿಬಿರ ನಡೆಯಲಿದೆ.
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ (KMC) ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷವಾಗಿದೆ. ಶಿಬಿರದಲ್ಲಿ ಮಹಿಳೆಯರಿಗೆ ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ, ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುವುದು.
ಗ್ರಾಮೀಣ ಪ್ರದೇಶದ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆಯೋಜಿಸಲಾಗಿರುವ ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.