
ನಿಟ್ಟೆ: ‘ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ತಮ್ಮ ಜೀವನ ಶೈಲಿಯನ್ನು ಇಂದಿನ ಯುವಕರಿಗೆ ಮಾದರಿಯಾಗಿಸಿದವರು’ ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.
ನಿಟ್ಟೆ ತಾಂತ್ರಿಕ ಕಾಲೇಜಿನ ರೆಡ್ ಕ್ರಾಸ್ ಯುನಿಟ್ ವತಿಯಿಂದ ಅ. 2 ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಯಾಂಪಸ್ ಮೈಟೆನೆನ್ಸ್ ಮತ್ತು ಡೆವಲಪ್ಮೆಂಟ್ ನಿರ್ದೇಶಕ ಪ್ರೊ. ಎ ಯೋಗೀಶ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನೆ ವಿಭಾಗದ ಡೀನ್ ಡಾ. ನರಸಿಂಹ ಬೈಲ್ಕೇರಿ, ಯೂಥ್ ರೆಡ್ ಕ್ರಾಸ್ ನ ಪ್ರಾಧ್ಯಾಪಕ ಸಂಯೋಜಕ ಡಾ. ಜನಾರ್ದನ್ ನಾಯಕ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.