ಕಸದ ರಾಶಿಯಿಂದ ಕಾರಿಗೆ ಬೆಂಕಿ: ಆನೇಕಲ್‌ನಲ್ಲಿ ಸಂಭವಿಸಿದ ಭಯಾನಕ ಘಟನೆ!

Date:

spot_img

ಆನೇಕಲ್: ಕಸದ ರಾಶಿಗೆ ಹಚ್ಚಿದ ಬೆಂಕಿಯಿಂದಾಗಿ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ವಿಘ್ನೇಶ್ ಎಂಬುವವರಿಗೆ ಸೇರಿದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ನಾಶವಾಗಿದೆ. ಶನಿವಾರ ಬೆಳಿಗ್ಗೆ, ಗೌರಿಶಂಕರ್ ಎಂಬುವವರು ಈ ಕಾರಿನಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ರಾತ್ರಿ 12 ಗಂಟೆ ಸುಮಾರಿಗೆ, ಚಂದಾಪುರದ ಕೀರ್ತಿ ಲೇಔಟ್ ಬಳಿ ಪಿಜಿ ಹೌಸ್ ಮುಂದೆ ಕಾರು ನಿಲ್ಲಿಸಿದ್ದರು.

ನಸುಕಿನ ಜಾವ 3 ಗಂಟೆ ವೇಳೆಗೆ, ಕಾರಿನ ಪಕ್ಕದಲ್ಲಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ ಪರಿಣಾಮ, ಬೆಂಕಿಯ ಕಿಡಿ ಕಾರಿಗೆ ತಗುಲಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸಲು ಹರಸಾಹಸಪಟ್ಟಿದೆ. ಅದೃಷ್ಟವಶಾತ್, ಪಕ್ಕದಲ್ಲಿದ್ದ ಮತ್ತೊಂದು ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿಲ್ಲ.

ಈ ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಬೆಂಕಿ ಹಚ್ಚಿದವರ ಪತ್ತೆಗೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.