ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ 2026 ಪದ ಪ್ರಧಾನ ಸಮಾರಂಭ

Date:

spot_img

ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭ ಬ್ರಹ್ಮಾವರ ಸಿಟಿ ಸೆಂಟರ್ ಸಿಂಧೂರ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಯಂಟ್ಸ್ ಸಂಸ್ಥೆಯು ಅನೇಕ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಅತ್ಯುತ್ತಮವಾಗಿ ಸೇವೆ ನೀಡುತ್ತಿರುವುದು ಅಭಿನಂದನೀಯ ಎಂದರು.

ಕರ್ನಾಟಕ ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆನಂದ್ ಜತ್ತನ್ ಶುಭ ಹಾರೈಸಿದರು.

ಜೆಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬೈ ಸೆಂಟ್ರಲ್ ಕಮಿಟಿ ಮೆಂಬರ್ ದಿನಕರ್ ಕೆ ಅಮೀನ್ ಮಾತನಾಡಿ, ಬ್ರಹ್ಮಾವರ ಜಯಂಟ್ಸ್ ಸಂಸ್ಥೆಯು ಪರಿಸರ ಕಾಳಜಿ ಮತ್ತು ನಿರಂತರ ವೈದ್ಯಕೀಯ ತಪಾಸಣಾ ಶಿಬಿರಗಳ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಇತ್ತೀಚಿಗೆ ನಡೆದ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಥೆಗೆ ಹಲವಾರು ಪ್ರಶಸ್ತಿಗಳು ಬಂದಿವೆ ಎಂದರು.
ವೇದಿಕೆಯಲ್ಲಿ ಫೆಡರೇಶನ್ ಮಾಜಿ ಅಧ್ಯಕ್ಷರಾದ ತೇಜೇಶ್ವರ್ ರಾವ್ , ಮಧುಸೂಧನ್ ಹೇರೂರು ಉಪಸ್ಥಿತರಿದ್ದರು. ಯೂನಿಟ್ ಡೈರೆಕ್ಟರ್ ಸುಂದರ ಪೂಜಾರಿ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಣ್ಣಯ್ಯ ದಾಸ್ ಮತ್ತು ಆಡಳಿತ ಮಂಡಳಿಯ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಾದ ಪ್ರತಿಭಾರವರ ಹುಟ್ಟುಹಬ್ಬ ಅದೇ ರೀತಿ ಪೂರ್ವ ಅಧ್ಯಕ್ಷ ವಿವೇಕಾನಂದ ಕಾಮತ್ ದಂಪತಿಗಳ ವಿವಾಹ ವಾರ್ಷಿಕೋತ್ಸವದ ಸಂಭ್ರಮ ನಡೆಯಿತು. ಸಂಸ್ಥೆ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಗ್ರಹ ಪತ್ರಿಕೆ ವನಸುಮ ಬಿಡುಗಡೆಗೊಳಿಸಲಾಯಿತು.

ಕಾರ್ಯದರ್ಶಿ ಮೀಲ್ಟನ್ ಒಲಿವರ್ ವಂದಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ನೂತನ ಪದಾಧಿಕಾರಿಗಳಾಗಿ ಸುಂದರ ಪೂಜಾರಿ, ಮಿಲ್ಟನ್ ಒಲಿವೇರಾ, ಶ್ರೀನಾಥ್ ಕೋಟ, ಪ್ರತಿಭಾ ಪೂಜಾರಿ, ರೋನಾಲ್ಡ್ ಡಯಾಸ್ ಆಯ್ಕೆಯಾದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ