ಅತ್ಯಾಚಾರದ ದೂರು ನೀಡಲು ಬಂದ ಬಾಲಕಿಗೆ ಕಾನ್ಸ್‌ಸ್ಟೇಬಲ್‌ನಿಂದ ಮತ್ತೆರಡು ಬಾರಿ ಅತ್ಯಾಚಾರ !

Date:

spot_img

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 17 ವರ್ಷದ ಬಾಲಕಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದಾಗ, ಅಲ್ಲಿಯೇ ಮತ್ತೊಂದು ದೌರ್ಜನ್ಯಕ್ಕೆ ಒಳಗಾದ ದಾರುಣ ಘಟನೆ ನಡೆದಿದೆ. ಪ್ರೀತಿಸುವ ನೆಪದಲ್ಲಿ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನ ವಿರುದ್ಧ ದೂರು ನೀಡಲು ಹೋದ ಬಾಲಕಿಗೆ, ಕಾನ್ಸ್‌ಸ್ಟೇಬಲ್‌ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಆಕೆಯ ಮೇಲೆ ಮತ್ತೊಮ್ಮೆ ಅತ್ಯಾಚಾರ ಎಸಗಿರುವ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮೈಕೋ ಲೇಔಟ್ ನಿವಾಸಿ 17 ವರ್ಷದ ಬಾಲಕಿಯನ್ನು ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಆದರೆ, ಆತನಿಗೆ ಈಗಾಗಲೇ ಮದುವೆಯಾಗಿರುವ ಸತ್ಯ ತಡವಾಗಿ ಗೊತ್ತಾದಾಗ, ಬಾಲಕಿ ಮೋಸ ಹೋಗಿದ್ದೇನೆ ಎಂದು ಪೊಲೀಸರನ್ನು ಸಂಪರ್ಕಿಸಿದ್ದಳು.

ಆದರೆ, ಬೊಮ್ಮನಹಳ್ಳಿ ಠಾಣೆಯ ಕಾನ್ಸ್‌ಸ್ಟೇಬಲ್‌ ತಾನು ನ್ಯಾಯ ಕೊಡಿಸುವೆ ಎಂದು ನಂಬಿಸಿ, ಕೆಲಸ ಕೊಡಿಸುವ ಭರವಸೆ ನೀಡಿದ್ದನು. ಬಳಿಕ ವಿಚಾರಣೆಗೋಸ್ಕರ ಕರೆದುಕೊಂಡು ಹೋಗುವುದಾಗಿ ಹೇಳಿ ಓಯೋ ಲಾಡ್ಜ್‌ಗೆ ಕರೆದೊಯ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಅಪ್ರಾಪ್ತೆಯೊಬ್ಬಳಿಗೆ ನ್ಯಾಯ ಒದಗಿಸಬೇಕಾದ ಪೊಲೀಸ್ ಅಧಿಕಾರಿ, ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಈ ಕೃತ್ಯ ಎಸಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಕಾನ್ಸ್‌ಸ್ಟೇಬಲ್‌ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.