ಶಿಕ್ಷಕಿಯ ಹೊಡೆತಕ್ಕೆ ಬಾಲಕಿಯ ತಲೆಬುರುಡೆಯಲ್ಲಿ ಬಿರುಕು: ಖಾಸಗಿ ಶಾಲೆ ವಿರುದ್ಧ ಪೋಷಕರು ದೂರು

Date:

spot_img

ಚಿತ್ತೂರು : ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲೆಯ ಶಿಕ್ಷಕಿಯೊಬ್ಬರು ಹೊಡೆದಿದ್ದಕ್ಕೆ ವಿದ್ಯಾರ್ಥಿನಿಯ ತಲೆಬುರುಡೆಯಲ್ಲಿ ಬಿರುಕು ಉಂಟಾಗಿದೆ. ಪುಂಗನೂರಿನ ಹರಿ ಮತ್ತು ವಿಜೇತಾ ದಂಪತಿಯ ಮಗಳು ಸಾತ್ವಿಕಾ ನಾಗಶ್ರೀ (11), ಸ್ಥಳೀಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾಳೆ.

ಸೆಪ್ಟೆಂಬರ್ 10 ರಂದು ತರಗತಿಯಲ್ಲಿ ಹಿಂದಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಸರಿಯಾಗಿ ವರ್ತಿಸಲಿಲ್ಲ ಎಂಬ ಕಾರಣಕ್ಕೆ ಆಕೆಯ ತಲೆಗೆ ಸ್ಕೂಲ್ ಬ್ಯಾಗ್ ನಿಂದ ಹೊಡೆದಿದ್ದಾರೆ. ಸಾತ್ವಿಕಾಳ ತಾಯಿ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರೂ, ಆರಂಭದಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.

ಹೊಡೆತದಿಂದ ತಲೆನೋವು ಹೆಚ್ಚಾಗಿದ್ದರಿಂದ ನಾಗಶ್ರೀ ಮೂರು ದಿನಗಳ ಕಾಲ ಶಾಲೆಗೆ ಹೋಗಲಿಲ್ಲ. ಪೋಷಕರು ಪುಂಗನೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಂತೆ ಸೂಚಿಸಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಆಕೆಯ ತಲೆಬುರುಡೆಯಲ್ಲಿ ಗಂಭೀರವಾದ ಬಿರುಕು ಉಂಟಾಗಿರುವುದು ಕಂಡುಬಂದಿದೆ. ಇದು ವಿದ್ಯಾರ್ಥಿನಿಯ ಆರೋಗ್ಯಕ್ಕೆ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆಯ ನಂತರ, ಸಾತ್ವಿಕಾ ನಾಗಶ್ರೀಯ ತಾಯಿ ಮತ್ತು ಸಂಬಂಧಿಕರು ಸೋಮವಾರ ರಾತ್ರಿ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಪೋಷಕರು ಮತ್ತು ಸಾರ್ವಜನಿಕರಲ್ಲಿ ಆಕ್ರೋಶವನ್ನು ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ