ಪ್ರಾಮಾಣಿಕತೆ ಮೆರೆದ ಹಿರಿಯಡ್ಕದ ಪ್ರಶಾಂತ್: ₹1.4 ಲಕ್ಷ ಮೌಲ್ಯದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

Date:

spot_img

ಉಡುಪಿ: ಹಿರಿಯಡ್ಕದ ನಾಗರಿಕರೊಬ್ಬರು ಅಪಾರ ಮೌಲ್ಯದ ಚಿನ್ನದ ಸರವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪ್ರಾಮಾಣಿಕತೆ ಮೆರೆದಿದ್ದಾರೆ.

ಸೆಪ್ಟೆಂಬರ್ 29, 2025ರಂದು ಕೊಪ್ಪ ಮೂಲದ ಸಂದೇಶ್ ಎಂಬುವವರು ತಮ್ಮ ಕುಟುಂಬದೊಂದಿಗೆ ಹಿರಿಯಡ್ಕದ ವೀರಭದ್ರ ದೇವಸ್ಥಾನಕ್ಕೆ ಬಂದಿದ್ದಾಗ, ಅವರ ಕುಟುಂಬ ಸದಸ್ಯರ 24 ಗ್ರಾಂ ತೂಕದ ಚಿನ್ನದ ಸರ ಕಳೆದುಹೋಗಿತ್ತು. ಈ ಕುರಿತು ಅವರು ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಕಳೆದುಹೋದ ಸ್ಥಳದ ಸುತ್ತಮುತ್ತ ಮತ್ತು ಸ್ಥಳೀಯರಲ್ಲಿ ವಿಚಾರಣೆ ನಡೆಸಿ, ಚಿನ್ನದ ಸರ ಸಿಕ್ಕಿದಲ್ಲಿ ಠಾಣೆಗೆ ಅಥವಾ ವಾರಸುದಾರರಿಗೆ ಹಿಂದಿರುಗಿಸುವಂತೆ ಮನವಿ ಮಾಡಿದ್ದರು.

ಪೊಲೀಸರ ಮನವಿಗೆ ಸ್ಪಂದಿಸಿದ ಹಿರಿಯಡ್ಕ ಮೂಲದ ಪ್ರಶಾಂತ್ ಎಂಬುವವರಿಗೆ ಈ ಸರ ಸಿಕ್ಕಿದ್ದು, ಅವರು ಸೆಪ್ಟೆಂಬರ್ 30, 2025ರಂದು ಅದನ್ನು ನೇರವಾಗಿ ಠಾಣೆಗೆ ತಂದು ಒಪ್ಪಿಸಿದ್ದಾರೆ.

ಪ್ರಾಮಾಣಿಕ ನಾಗರಿಕನಿಗೆ ಸನ್ಮಾನ

ಪ್ರಶಾಂತ್ ಅವರ ಈ ನಿಸ್ವಾರ್ಥ ಮತ್ತು ಉತ್ತಮ ಕಾರ್ಯವನ್ನು ಅಭಿನಂದಿಸಿದ ಹಿರಿಯಡ್ಕ ಠಾಣೆಯ ಪಿಎಸ್‌ಐ ಪುನೀತ್ ಸರ್ ಮತ್ತು ತನಿಖಾ ಪಿಎಸ್‌ಐ ವಿಠಲ್ ಸರ್ ಅವರು, ಪ್ರಶಾಂತ್‌ಗೆ ಸನ್ಮಾನಿಸಿ ಗೌರವಿಸಿದರು. ನಂತರ ಕಳೆದುಹೋಗಿದ್ದ ಚಿನ್ನದ ಸರವನ್ನು ಅದರ ವಾರಸುದಾರರಾದ ಸಂದೇಶ್ ಕುಟುಂಬಕ್ಕೆ ಹಿಂದಿರುಗಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.