
ಬೆಂಗಳೂರು: ರಾಜ್ಯದ ಅತಿಥಿ ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮೂಲಕ ಸಿಹಿಸುದ್ದಿ ನೀಡಿದ್ದು, ಅವರ ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಮುಖ್ಯಮಂತ್ರಿಯಾಗಿ 9ನೇ ಬಜೆಟ್ ಆಗಿದ್ದು, ಒಟ್ಟಾರೆ 16ನೇ ಬಜೆಟ್ ನೀಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಈ ಬಾರಿಯ ಬಜೆಟ್ ಗಾತ್ರವು 4 ಲಕ್ಷ ಕೋಟಿ ರೂ. ದಾಟಲಿದೆ ಎಂದು ನಿರೀಕ್ಷಿಸಲಾಗಿದ್ದು, ರಾಜ್ಯದ ಅಭಿವೃದ್ಧಿ, ಸಾಮಾಜಿಕ ಕಲ್ಯಾಣ ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಹಲವು ಮಹತ್ವದ ಘೋಷಣೆಗಳು ಹೊರಬೀಳಲಿವೆ.