
ಹಿರಿಯಡ್ಕ : 2024-25ನೇ ಶೈಕ್ಷಣಿಕ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು , ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 176 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 87 % ಫಲಿತಾಂಶ ಬಂದಿರುತ್ತದೆ . ಅವರಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 87 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಅನನ್ಯ 619 ಅಂಕ ಪಡೆದು 99 % ದೊಂದಿಗೆ ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ , ಆಶಿತಾ ಕಾಮತ್ 617 ಅಂಕ ಪಡೆದು 98.72% ದೊಂದಿಗೆ ಸಂಸ್ಥೆಗೆ ದ್ವಿತೀಯ ಸ್ಥಾನಿಯಾಗಿರುತ್ತಾರೆ .ನವ್ಯಶ್ರೀ 599 ಅಂಕಗಳು , ಮಾನ್ಯ ನಾಯಕ್ 591ಅಂಕಗಳು , ಆರ್ಯ ಪ್ರದ್ಯುಮ್ನ 586 ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಬಿ. ಎಲ್ ವಿಶ್ವಾಸ್ ಅಧ್ಯಕ್ಷರು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವರ್ಗದವರು , ಶಿಕ್ಷಕೇತರ ವೃಂದದವರು ಸಂತಸ ವ್ಯಕ್ತಪಡಿಸಿ, ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.