
ಕಾರ್ಕಳ : ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯ ನಿಯಮಗಳ ಪ್ರಕಾರ, ನಿಗದಿತ ಅವಧಿಗಿಂತ ಹೆಚ್ಚು ವರ್ಷ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸಿದವರನ್ನು ವರ್ಗಾವಣೆಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಡೆದಿದೆ.
ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಡಾ. ಚಂದ್ರಕಾಂತ್ ಅವರು ಜುಲೈ 16 ರಂದು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಬೆಳ್ತಂಗಡಿಯಲ್ಲಿ ಅವರ ಸುದೀರ್ಘ ಸೇವೆಗೆ ಮೆಚ್ಚುಗೆ ವ್ಯಕ್ತವಾಗಿದೆ.