spot_img

ಸರ್ಕಾರಿ ಪಾಲಿಟೆಕ್ನಿಕ್‌ ಕ್ಯಾಂಪಸ್: ಶಾಸಕ ವಿ ಸುನಿಲ್ ಕುಮಾರ್ ಭೇಟಿ – ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

Date:

ಜೂನ್ 16 : ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ ರೈಟ್ಸ್ ಮೂಲಕ ನೂತನವಾಗಿ ನಿರ್ಮಾಣಗೊಂಡ 01 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಬಳಿಕ ಸುಮಾರು 3.97 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸುತ್ತಿರುವ ಪಾಲಿಟೆಕ್ನಿಕ್ ಕಟ್ಟಡ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಿದರು. ಜೊತೆಗೆ ಮಳೆಗಾಲದ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಅಂಗವಾಗಿ ಪಾಲಿಟೆಕ್ನಿಕ್ ವಠಾರದಲ್ಲಿ ಮಳೆ ನೀರು ಹರಿದು ಹೋಗಲು ಒಳಚರಂಡಿ ವ್ಯವಸ್ಥೆ ಹಾಗೂ ಹೈ ವೋಲ್ಟೇಜ್ ವಿದ್ಯುತ್‌ ಪರಿವರ್ತಕ ಮತ್ತು ಜನರೇಟರ್ ಗಳಿಗೆ ಪ್ರತ್ಯೇಕ ಮಾಡಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಯೋಜನೆಯಡಿ ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಲಕರ ಶೌಚಾಲಯ ಕಾಮಗಾರಿ ವೀಕ್ಷಿಸಿ ಕ್ಯಾಂಪಸ್ಸಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್‌ಟ್ಯೂಟ್ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ನಂತರ ಅವರು ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆದ್ಯತೆಯ ಅನುಸಾರ ತ್ವರಿತವಾಗಿ ಪೂರ್ಣಗೊಳಿಸುವ ಕಾಮಗಾರಿಗಳು ಮತ್ತು ಹೆಚ್ಚುವರಿ ಅನುದಾನ ಪಡೆದು ಶೀಘ್ರ ಪೂರೈಸುವ ಕಾಮಗಾರಿಗಳ ಪಟ್ಟಿ ತಯಾರಿಸಿ, ತ್ವರಿತ ವಿಲೇವಾರಿಗಾಗಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಂದು ಪ್ರಕಟಣೆಯಲ್ಲಿ ಶಾಸಕರ ವಿಕಾಸ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಾಸ ಜನಸೇವಾ ಕಛೇರಿ ಕಾರ್ಕಳ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.