spot_img

ಸರ್ಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು….. ವಿವೇಕ್ ಆಳ್ವ

Date:

spot_img

ಸಾಣೂರು : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸಾಣೂರು ಇಲ್ಲಿ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವರವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸಮಾಜದಲ್ಲಿ ಸವಾಲನ್ನು ಎದುರಿಸಬಲ್ಲವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನೆಲ್ಲಿ ,ಇಲ್ಲಿಯ ಮೊಕ್ತೇಸರರಾದ ಸುನಿಲ್ ಕೆ ಆರ್.ರವರು ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಸಂದೀಪ್ ಕುಡ್ವ, ನ್ಯಾಯವಾದಿಗಳಾದ ನಂದಿನಿ ಶೆಟ್ಟಿ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಸಂತ್ ಎಂ ನಿವೃತ್ತ ಮುಖ್ಯ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಉಪನ್ಯಾಸಕರಾದ ಜಗದೀಶ್ ರವರು ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆಗಸ್ಟ್ 15 ರಿಂದ ‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಜಾರಿ: ₹3000ಕ್ಕೆ 200 ಟ್ರಿಪ್‌ಗಳಿಗೆ ಟೋಲ್ ಫ್ರೀ!

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ, ಅಂದರೆ ಆಗಸ್ಟ್ 15, 2025 ರಿಂದ, ರಾಷ್ಟ್ರೀಯ ಹೆದ್ದಾರಿಗಳಲ್ಲಿ "ಫಾಸ್ಟ್ಯಾಗ್ ವಾರ್ಷಿಕ ಪಾಸ್" ಅನ್ನು ಜಾರಿಗೊಳಿಸಲಾಗುವುದು ಎಂದು ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತೇಜಸ್ : ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ, ಆತ್ಮಹತ್ಯೆಯ ಶಂಕೆ

ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.

“ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”ಎಂದು ಪೋಸ್ಟ್ ಹಾಕಿದ ಕಾರ್ಕಳದ ಯುವಕನ ವಿರುದ್ಧ FIR

"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.

ನಟಿ ಭಾವನಾ ರಾಮಣ್ಣ ಅವಳಿ ಮಕ್ಕಳ ನಿರೀಕ್ಷೆಯಲ್ಲಿ: 40ನೇ ವಯಸ್ಸಿನಲ್ಲಿ ಐವಿಎಫ್ ಮೂಲಕ ತಾಯ್ತನಕ್ಕೆ ಸಜ್ಜು

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಅವರು ತಾಯ್ತನದ ಖುಷಿಯಲ್ಲಿದ್ದಾರೆ.