spot_img

ಗೃಹಲಕ್ಷ್ಮಿ ಯೋಜನೆ ನಿರಂತರ: ಚುನಾವಣಾ ಆರೋಪ ಸುಳ್ಳು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಈ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೇರವಾಗಿ ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣಾ ಕ್ಷೇತ್ರಗಳಿಗೆ ಮಾತ್ರ ಹಣ ನೀಡಲಾಗುತ್ತಿದೆ ಎಂಬ ಆರೋಪ ಶುದ್ಧ ಸುಳ್ಳು, ಆಧಾರರಹಿತ” ಎಂದು ಅವರು ಸ್ಪಷ್ಟಪಡಿಸಿದರು.

ಯೋಜನೆಗೆ ಯಾವುದೇ ಅಡೆತಡೆ ಇಲ್ಲ ಎಂದು ತಿಳಿಸಿದ ಸಚಿವೆ, “ಜಿಎಸ್ಟಿ, ಜಿಎಸ್ಟಿಯೇತರ ಹಾಗೂ ಆದಾಯ ತೆರಿಗೆ ಅಂಶಗಳನ್ನು ಪರಿಗಣಿಸಿ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ನವೆಂಬರ್, ಡಿಸೆಂಬರ್ ತಿಂಗಳ ಹಣ ಶೀಘ್ರದಲ್ಲೇ ಸಂದಾಯ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆ ಚುನಾವಣೆಗೋಸ್ಕರವಲ್ಲ, ಅದು ನಿರಂತರವಾಗಿ ಮುಂದುವರಿಯಲಿದೆ” ಎಂದು ಭರವಸೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಾತಿಗಣತಿ ವರದಿ ಬಗ್ಗೆ ನಂಬಿಕೆ ಇಲ್ಲದಿದ್ದರೆ ಜಯಪ್ರಕಾಶ ಹೆಗ್ಡೆ ಬಳಿ ಕೇಳಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

“ಜಾತಿಗಣತಿ ವರದಿ ಸಿದ್ದರಾಮಯ್ಯ ಮನೆಯಲ್ಲಿ ಇದೆ” ಎನ್ನುವ ಆರ್. ಅಶೋಕ್ ಆರೋಪಕ್ಕೆ ಡಿಕೆಶಿ ತಿರುಗೇಟಾಗಿ ಜಯಪ್ರಕಾಶ ಹೆಗ್ಡೆಯವರ ಬಳಿ ಕೇಳಬಹುದು ಎಂದರು.

ಚಿನ್ನದ ದರ ಇತಿಹಾಸದ ಗರಿಷ್ಠ ಮಟ್ಟಕ್ಕೆ: ದೆಹಲಿಯಲ್ಲಿ 10 ಗ್ರಾಂ ಚಿನ್ನ ₹99,800, ಬೆಳ್ಳಿಯೂ ಏರಿಕೆ

ದೇಶದ ಚಿನ್ನ ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸೋಮವಾರ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಮುಂಬೈದಿಂದ ಮಂಗಳೂರಿಗೆ ಸಾಗುತ್ತಿದ್ದ ಐರಾವತ ಬಸ್ಸಿನ ಸೀಟಿನಲ್ಲೇ ಪ್ರಾಣಬಿಟ್ಟ ಪ್ರಯಾಣಿಕ

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ KSRTC ಐರಾವತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಏಪ್ರಿಲ್ 21 ರಂದು ಮುಂಜಾನೆ ಉಡುಪಿಯಲ್ಲಿ ನಡೆದಿದೆ.

ದಿನ ವಿಶೇಷ – ರಾಷ್ಟ್ರೀಯ ಭೂ ದಿನ

ಭೂಮಿಯನ್ನು ಪ್ರೀತಿಸದೆ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಭೂಮಿಯನ್ನು ಹಾಗೂ ಪರಿಸರವನ್ನು ಪ್ರೀತಿಸಬೇಕು ಎನ್ನುವ ಉದ್ದೇಶದಿಂದ ಪಾಶ್ಚಾತ್ಯರು ಈ ದಿನವನ್ನು ಭೂಮಿಯ ನೆನಪಿನಲ್ಲಿ ಸೀಮಿತವಾಗಿಸಿದ್ದಾರೆ.