ಮದುವೆಗೆ ನೀಡಲಾದ ಐಷಾರಾಮಿ ಉಡುಗೊರೆಗಳ ವಿಡಿಯೋ ವೈರಲ್ ಮಾಡಿದ ವರ !

Date:

spot_img

ಮದುವೆಯ ಹೆಸರಿನಲ್ಲಿ ನೀಡಲಾದ ಭರ್ಜರಿ ಉಡುಗೊರೆಗಳಾದ ಕಾರು, ಬೈಕ್, ಚಿನ್ನಾಭರಣ, ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳನ್ನು ಒಂದೇ ಸ್ಥಳದಲ್ಲಿ ಪ್ರದರ್ಶನಗೊಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳು, ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳು, ಡಜನ್ ಗಟ್ಟಲೆ ಎಸಿ, ಟಿವಿ, ಫ್ರಿಜ್, ನೂರಾರು ಸೀರೆಗಳು, ಸಾವಿರಾರು ಪಾತ್ರೆಗಳು ಹಾಗೂ ದುಬಾರಿ ಪೀಠೋಪಕರಣಗಳ ಭಾರೀ ಶೋ ಕಂಡು ನೇಟಿಗರು ಬೆರಗಾಗಿದ್ದಾರೆ. ವರನಿಗಷ್ಟೇ ಅಲ್ಲದೆ, ಮಾವ, ಅತ್ತಿಗೆ, ಭಾವ ಮಿತ್ರರಿಗೂ ಬೈಕ್ ಉಡುಗೊರೆ ನೀಡಲಾಗಿದೆ!

ಈ ‘ವೈಭವದ’ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು “ಇದು ಕುಟುಂಬದ ಔದಾರ್ಯ” ಎಂದು ಹೊಗಳಿದರೆ, ಅನೇಕರು “ಇದು ವರದಕ್ಷಿಣೆ ಸಂಸ್ಕೃತಿಯ ಪ್ರಚಾರ, ಕಾನೂನು ಉಲ್ಲಂಘನೆ” ಎಂದು ಕಿಡಿಕಾರಿದ್ದಾರೆ. “ಇದು ಪ್ರೀತಿಯ ಅಭಿವ್ಯಕ್ತಿ ಅಲ್ಲ, ಶ್ರೀಮಂತಿಕೆಯ ಶೋ” ಎಂಬ ಟೀಕೆಗಳೂ ಹರಿದು ಬಂದಿದೆ.

ಇಂತಹ ಘಟನೆಗಳು ವರದಕ್ಷಿಣೆ ನಿಷೇಧ ಕಾಯ್ದೆಯ ಜಾರಿಗೆ ಪ್ರಶ್ನಾರ್ಥಕ ಚಿಹ್ನೆ ಎಳೆದಿವೆ. ಈ ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದು ಈಗ ಕುತೂಹಲದ ವಿಷಯವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.