spot_img

ಅ.16 : ‘ಜಿ ಎಸ್ ಟಿ ಸುಧಾರಣೆಗಳು’ ವಿಚಾರ ಸಂಕಿರಣ

Date:

spot_img
spot_img

ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿ ಎಸ್ ಟಿ 2.0’ (ಜಿ ಎಸ್ ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಎ. ಸುವರ್ಣ ಅವರು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಖ್ಯಾತ ಅರ್ಥ ಶಾಸ್ತ್ರಜ್ಞ ವಿಶ್ವನಾಥ ಭಟ್ ಅವರು ವಿಚಾರ ಸಂಕಿರಣವನ್ನು ನಡೆಸಿಕೊಡಲಿದ್ದಾರೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಆಸಕ್ತ ಸಾರ್ವಜನಿಕ ಬಂಧುಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ., ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಪ್ರಿಯಾಂಕ್ ಖರ್ಗೆ ಜೋಕರ್ ತರ ಆಗಿದ್ದಾರೆ’: ಆರ್‌ಎಸ್‌ಎಸ್ ಬಗ್ಗೆ ಪತ್ರ ಬರೆದ ಸಚಿವರಿಗೆ ಜನಾರ್ದನ ರೆಡ್ಡಿ ಟೀಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ "ಜೋಕರ್ ತರ ಆಗಿದ್ದಾರೆ" ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದರು.

ಕಾಡಾನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.1; ಆದರೂ ಭಾರತದಲ್ಲಿ ಒಟ್ಟು ಸಂಖ್ಯೆ ಶೇ. 18ಕ್ಕೆ ಇಳಿಕೆ

ದೇಶದಲ್ಲಿ ಅತಿಹೆಚ್ಚು ಕಾಡಾನೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕವು ಪ್ರಥಮ ಸ್ಥಾನದಲ್ಲಿದೆ.

ಆರ್ ಎಸ್ ಎಸ್ ನ ಸೇವಾ ಕಾರ್ಯದಿಂದ ರಾಷ್ಟ್ರ ಇನ್ನಷ್ಟು ಬೆಳಗಲಿ :ಪುತ್ತಿಗೆ ಸುಗುಣೇಂದ್ರ ಶ್ರೀ ಆಶೀರ್ವಚನ ; ದತ್ತಾತ್ರೇಯ ಹೊಸಬಾಳೆಗೆ ಅನುಗ್ರಹ ಮಂತ್ರಾಕ್ಷತೆ

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಆರ್ ಎಸ್ ಎಸ್ ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರಿಗೆ ಶ್ರೀಕೃಷ್ಣ-ಮುಖ್ಯಪ್ರಾಣ ದೇವರ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.

ಕಟೀಲು ಯಕ್ಷಗಾನ ಮೇಳಗಳ ಪ್ರಾರಂಭೋತ್ಸವ: ನ. 15ಕ್ಕೆ ಭವ್ಯ ಮೆರವಣಿಗೆ, 16ಕ್ಕೆ ಏಳನೇ ಮೇಳ ಪಾದಾರ್ಪಣೆ

ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳೂ ಮೇಳಗಳ ಪ್ರಾರಂಭೋತ್ಸವದ ದಿನಾಂಕವನ್ನು ಪ್ರಕಟಿಸಲಾಗಿದೆ.