‘ವಿಕಸಿತ ಭಾರತಕ್ಕೆ ಜಿ ಎಸ್ ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ

Date:

spot_img
kutyaru navin shetty11

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿ ಎಸ್ ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಕೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅದಕ್ಕೆ ತಕ್ಕುದಾದ ಸಕಾಲಿಕ ನಿರ್ಣಯವನ್ನು ತೆಗೆದುಕೊಂಡಿದೆ. ಆ ಮುಖೇನ ದೇಶದ ರೈತರ, ಯುವ ಜನರ ಮತ್ತು ಸಣ್ಣ ಉದ್ದಿಮೆದಾರರ ಹಿತ ರಕ್ಷಣೆಗೆ ಮುಂದಾಗಿದೆ. ಜಿ ಎಸ್ ಟಿ ದರ ಕಡಿತ ಗೊಳಿಸುವ ಮೂಲಕ ಸಾಮಾನ್ಯ ಜನರ, ಬಡವರ ಮತ್ತು ಮಧ್ಯಮ ವರ್ಗದವರ ಕೈಯಲ್ಲಿ ಹಣ ಉಳಿಯುವಂತೆ ಮಾಡಿ ಹೆಚ್ಚಿನ ಖರೀದಿಗೆ ಪ್ರೋತ್ಸಾಹಿಸಿ, ವಿಕಸಿತ ಭಾರತಕ್ಕೆ ಮುನ್ನುಡಿ ಬರೆದಿದೆ.

ಸುಮಾರು 390ಕ್ಕಿಂತಲೂ ಹೆಚ್ಚಿನ ವಸ್ತುಗಳ ತೆರಿಗೆಯನ್ನು ಕಡಿತಗೊಳಿಸಿ ಗರಿಷ್ಠ ವಿನಾಯಿತಿಯನ್ನು ನೀಡಿರುವ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಣಯವನ್ನು ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮದಿಂದ ಸ್ವಾಗತಿಸುತ್ತದೆ.

ಜಿ ಎಸ್ ಟಿ ದರ ಕಡಿತ ದೇಶವಾಸಿಗಳಿಗೆ ನವರಾತ್ರಿ, ದೀಪಾವಳಿ ಸಹಿತ ಇತರ ಹಬ್ಬಗಳನ್ನು ಸಂಭ್ರಮಿಸಲು ದೊರೆತ ಬೋನಸ್ ನಂತಿದೆ ಎಂದು ಕುತ್ಯಾರು ತಿಳಿಸಿದ್ದಾರೆ.

ಈ ಪ್ರಕ್ರಿಯೆ ಯಶಸ್ವಿಯಾಗಲು ಜನತೆ ಈ ರೀತಿ ಸಹಕಾರ ನೀಡಬೇಕಾಗಿದೆ:

  1. ತಯಾರಕರು ಜಿಎಸ್ಟಿ ದರ ಕಡಿತಗೊಳಿಸಿದ ವಸ್ತುವಿಗೆ ಹೊಸ ಕಡಿತ ದರ ಪ್ರಿಂಟ್ ಮಾಡುವುದು. ಈಗಾಗಲೇ ತಯಾರಾದ ವಸ್ತುವಿಗೆ ಹೊಸ ದರ ಸ್ಟಿಕ್ಕರ್ ಅಂಟಿಸುವುದು.
  2. ವ್ಯಾಪಾರಿಗಳು ಕಡಿತಗೊಂಡ ಬೆಲೆಯಲ್ಲಿಯೇ ಮಾರುವುದು. ಮೊದಲೇ ಖರೀದಿಸಿದ MRP ಬೆಲೆ ಇದ್ದರೂ ಕಡಿತ ದರದ ಹೊಸ ಸ್ಟಿಕ್ಕರ್ ಅಂಟಿಸುವುದು.
  3. ಗ್ರಾಹಕರು ನಿಗದಿತ ವಸ್ತುಗಳನ್ನು ಖರೀದಿಸುವಾಗ ಕಡಿತಗೊಳಿಸಿದ ಬೆಲೆಯಲ್ಲಿಯೇ ಕೇಳಿ ಪಡೆಯುವುದು.

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶೀಯ ವಸ್ತುಗಳನ್ನು ಖರೀದಿಸಿ ಆತ್ಮ ನಿರ್ಭರತೆಗೆ ಪ್ರೋತ್ಸಾಹ ನೀಡಬೇಕು.

ಉಡುಪಿ ಜಿಲ್ಲಾ ಬಿಜೆಪಿ ಈ ಬಗ್ಗೆ ಜನತೆಗೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಕಾರ್ಯಾಗಾರ, ಅಲ್ಲಲ್ಲಿ ಜಾಹೀರಾತುಗಳು ಮತ್ತು ಗ್ರಾಹಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಸಂಭ್ರಮಾಚರಣೆಯನ್ನು ನಡೆಸಿ ಜಿ ಎಸ್ ಟಿ ಸುಧಾರಣೆಯ ಲಾಭ ಜನರಿಗೆ ತಲುಪುವಂತೆ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.