
ಕಾರ್ಕಳ : ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ಮಹತ್ವಕಾಂಕ್ಷೆಯ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅದಾಲತ್ ನಡೆಸಲು ತೀರ್ಮಾನಿಸಲಾಗಿದೆ. ಇದರ ಉದ್ದೇಶ ಗ್ಯಾರಂಟಿ ಯೋಜನೆಯು ಹಲವಾರು ಕಾರಣಗಳಿಂದ ಯಾರು ಅರ್ಹ ಪಲಾನುಭವಿಗಳು ವಂಚಿತರಾಗಿದ್ದಾರೋ ಅವರಿಗೆ ತಲುಪಿಸುವುದು ಈ ಅದಾಲತ್ ನ ಉದ್ದೇಶ. ಇದರ ಭಾಗವಾಗಿ ಇಂದು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಇನ್ನಾ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಯಶಸ್ವಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು , ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ಶ್ರೀ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ಜಿಲ್ಲಾ ಕಮಿಟಿ ಸದಸ್ಯರಾದ ದೀಪಕ್ ಕೋಟ್ಯಾನ್ ಇನ್ನಾ, ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷರು,ಕಾರ್ಕಳ ತಾಲೂಕು ಕಾರ್ಯ ನಿರ್ವಾಹಣ ಅಧಿಕಾರಿ ಪ್ರಶಾಂತ್ ರಾವ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಇನ್ನಾ ಮುದ್ದಾಣು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.

ಈ ಅದಾಲತ್ ಸಂಪೂರ್ಣ ಯಶಸ್ವಿಯಾಗಿದ್ದು, ಕೆಲವೊಂದು ಅರ್ಹ ಪಲಾನುಭವಿಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ.ಈ ಕಾರ್ಯಕ್ರಮದ ಯಶಸ್ವಿಗೆ ಕಾರಣಿಕರ್ತರಾದ ಆಶಾ ಕಾರ್ಯಕರ್ತರನ್ನು ಗೌರವಿಸಲಾಯಿತು.