ಮುದ್ರಾಡಿ ಪ್ರೌಢಶಾಲೆಗೆ ಕ್ರೀಡಾ ಪರಿಕರಗಳ ಹಸ್ತಾಂತರ

Date:

spot_img

ಹೆಬ್ರಿ : ಕಲಿತ ಶಾಲೆಗೆ ಕಿಂಚಿತ್ತಾದರೂ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ. ಕನ್ನಡ ಮಾಧ್ಯಮ ಶಾಲೆಯಲ್ಲಿ ಸಿಗುವ ಮಾನವೀಯ ಮೌಲ್ಯ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ.ಅಂಕ ಗಳಿಸುವ ಭರದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಹಿಂದೆ ಬೀಳಬೇಡಿ ಎಂದು ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟು ಹೇಳಿದರು. ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಾಗರ ಎಜ್ಯುಕೇಶನ್ ಟ್ರಸ್ಟ್ (ರಿ.) ನ ಕಾರ್ಯದರ್ಶಿ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಶಾಲೆಗೆ ನೀಡಿದ ಧನ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ 1995-96 ನ ಸಾಲಿನ ವಿದ್ಯಾರ್ಥಿಗಳಾದ ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟು ಬಲ್ಲಾಡಿ, ಶ್ರೀನಿವಾಸ ಉಪಾಧ್ಯಾಯ ಮುದ್ರಾಡಿ ಉಡುಪಿ, ಸೌಮ್ಯ ಪ್ರಭು ಮುದ್ರಾಡಿ ಬೆಂಗಳೂರು, ಅಶೋಕ ಪೂಜಾರಿ ಸಾಂತ್ರಪಲ್ಕೆ ಮುದ್ರಾಡಿ, ಶರತ್ ಶೆಟ್ಟಿ ಮುದ್ರಾಡಿ, ರಾಘವೇಂದ್ರ ಆಚಾರ್ಯ ಮುದ್ರಾಡಿ, ನವೀನ್ ಆಚಾರ್ಯ ಕೆಲಕಿಲ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಶ್ಯಾಮಲಾ ನಿರೂಪಿಸಿ, ರಘುಪತಿ ಹೆಬ್ಬಾರ್ ವಂದಿಸಿದರು. ಶಿಕ್ಷಕರಾದ ಮಹೇಶ್ ನಾಯ್ಕ ಕೆ , ಪಿ. ವಿ.ಆನಂದ, ಚಂದ್ರಕಾಂತಿ ಹೆಗ್ಡೆ, ಮಹೇಶ ಎಂ. ಸಹಕರಿಸಿದರು. 1995-96 ನೆ ಸಾಲಿನ ಹಿರಿಯ ವಿದ್ಯಾರ್ಥಿಗಳೆಲ್ಲರ ಸಹಕಾರ ದಿಂದ ಈ ಕಾರ್ಯಕ್ರಮ ಸಂಪನ್ನಗೊಂಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ