ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ ಮಂಗಳೂರು ಕಮಿಷನರೇಟ್‌ಲ್ಲಿ 56 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

Date:

spot_img

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ನಂತರ ರಾಜ್ಯದ ಗೃಹ ಇಲಾಖೆ ತೀವ್ರ ಚಟುವಟಿಕೆಯಲ್ಲಿ ತೊಡಗಿದ್ದು, ಕೋಮು ಸೌಹಾರ್ಧತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬಜ್ಜೆ ಠಾಣೆ ಹೆಡ್ ಕಾನ್ಸ್ಟೇಬಲ್ ರಶೀದ್ ವರ್ಗಾವಣೆ:
ಈ ಪೈಕಿ ಬಜ್ಜೆ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ಅವರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸುಹಾಸ್ ಶೆಟ್ಟಿಯ ಹಂತಕರಿಗೆ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ ಎಂಬ ಆರೋಪ ಬಿಜೆಪಿ ನಾಯಕರಿಂದ ಕೇಳಿಬಂದಿತ್ತು.

ಗೃಹ ಇಲಾಖೆಯ ತ್ವರಿತ ಕ್ರಮ:
ಕರಾವಳಿಯಲ್ಲಿ ಕೋಮು ಬಾಂಧವ್ಯ ಕದಡುತ್ತಿರುವ ಸಂದರ್ಭಗಳನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ, ಈಗಾಗಲೇ ವಿಶೇಷ ಟಾಸ್ಕ್‌ಫೋರ್ಸ್ ರಚನೆಗೈದು ಕ್ರಮ ಕೈಗೊಂಡಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಬದಲಾವಣೆ ಆರಂಭವಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಂದ ವರ್ಗಾವಣೆ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ಸಿಬ್ಬಂದಿಗೆ ವರ್ಗಾವಣೆ ಸಾಧ್ಯತೆ:
ಈ ಹಿಂದೆ ಹಲವು ವರ್ಷಗಳಿಂದ ಒಂದೇ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ಮಂದಿಗೆ ಮುಂದಿನ ದಿನಗಳಲ್ಲಿ ವರ್ಗಾವಣೆ ನಡೆಯಲಿದೆ ಎಂಬ ಸುಳಿವಿದೆ. ಕೋಮು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕ್ರಮಗಳು ತೀವ್ರಗೊಳ್ಳುತ್ತಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ