
ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ನಂದಿನಿ ಶೆಟ್ಟಿಯವರು ಮಾತನಾಡುತ್ತಾ ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶಾಲಾ ವಿದ್ಯಾರ್ಥಿಗಳು ದುಶ್ಚಟ ಮುಕ್ತರಾಗಿರಬೇಕು ಅದರಿಂದ ದೂರವಿರಬೇಕು . ಆರೋಗ್ಯವಂತ ಶರೀರವೇ ಆತ್ಮದ ಅರಮನೆ , ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ, ದುಶ್ಚಟಗಳು ದೈಹಿಕವಾಗಿ ಮಾನಸಿಕವಾಗಿ ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾದ, ಭೀಕರವಾದ, ಬರ್ಬರವಾದ ಸಮಸ್ಯೆಗಳಾಗುತ್ತವೆ.ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನತೆ ಯಾವುದೇ ಕಾರಣಕ್ಕೂ ದುಷ್ಟಕ್ಕೆ ಬಲಿಯಾಗಬಾರದು. ದುಶ್ಚಟ ದುರಾಭ್ಯಾಸ ದೈಹಿಕವಾಗಿ ಮಾನಸಿಕವಾಗಿ ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾಗಿ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿವೆ. ಮನೆಯ, ಮೆಹಂದಿ ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ಹಾಗೂ ಮಧ್ಯಪಾನಗಳನ್ನು ಸೇವಿಸಿ ನೃತ್ಯ ಮಾಡುವ ವ್ಯವಸ್ಥೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಕುಣಿತ ಭಜನೆಗಳನ್ನು ಮಾಡಬೇಕು ಎಂದು ವಿವರಿಸಿ ಮಾಹಿತಿಯನ್ನು ನೀಡಿದರು.

ತಾಲ್ಲೂಕು ಜನಜಾಗೃತಿ ಸದಸ್ಯರಾದ ಅಶೋಕ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಎಸ್ ಕೆ ಡಿ ಆರ್ ಡಿ ಪಿ ಟ್ರಸ್ಟ್ ಗಳಿಂದ ಇಂತಹ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಹಾಗೂ ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು ಎಂಬುದಾಗಿ ತಿಳಿಸಿದರು.
ಪ್ರಾಂಶುಪಾಲರಾದ ಪ್ರದೀಪ್ ರವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ದುಶ್ಚಟಗಳ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯವರಿಗೆ ವಂದನೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅನಿಲ್ ರವರು ಸ್ವಾಗತಿಸಿ ಮೇಲ್ವಿಚಾರಕರಾದ ಗೀತಾರವರು ವಂದಿಸಿದರು. ಶಾಲಾ ಮಕ್ಕಳು, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಒಟ್ಟು 250ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.