
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿನಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ತಂಪಿನ ಅನುಭವವಾಗಿದೆ. ಮಂಗಳೂರು, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಪರಿಣಾಮವಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನಜೀವನಕ್ಕೆ ತೊಂದರೆ ಉಂಟಾಗಿದೆ. ಜಿಲ್ಲೆಯ ಹಲವು ಕಡೆಗಳಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ, ನೇಮ ಮತ್ತು ನಾಟಕ ಕಾರ್ಯಕ್ರಮಗಳಿಗೆ ಮಳೆಯಿಂದ ಅಡಚಣೆ ಉಂಟಾಗಿದೆ.
ಅಡಕೆ ಒಣಗಿಸಲು ಹೊರಗೆ ಹಾರದಿದ್ದ ರೈತರು ಮಳೆಯಿಂದಾಗಿ ನಷ್ಟ ಅನುಭವಿಸಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಈ ಮಳೆಯು ಇನ್ನೂ ಕೆಲ ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.



































