
ಹೆಬ್ರಿ: ಯುವಕರು ರಾಷ್ಟ್ರದ ಸಂಪತ್ತು. ಯುವಶಕ್ತಿ ಸದ್ಭಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ. ಗ್ರಾಮದ ಎಲ್ಲ ಸಂಘಟನೆಗಳು ಸಮಾಜಮುಖಿ ಚಟುವಟಿಕೆ ಗಳನ್ನು ನಡೆಸಿದಾಗ ಊರಿನ ಕೀರ್ತಿ ಎಲ್ಲೆಡೆ ಪಸರಿಸುತ್ತದೆ. ಆ ನಿಟ್ಟಿನಲ್ಲಿ ಗ್ರಾಮದ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಸಹಿತ ವಿವಿಧ ಕ್ಷೇತ್ರಗಳಲ್ಲಿ ಸ್ವಯಂಸ್ಫೂರ್ತಿಯಿಂದ ಪಾಲ್ಗೊಳ್ಳುವ ಮೂಲಕ ಈಶ್ವರನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಟನೆ ಎಲ್ಲರಿಗೂ ಮಾದರಿಯಾಗಿದೆ. ನಿಮ್ಮಿಂದ ಇನ್ನಷ್ಟು ಜನಪರ ಕಾರ್ಯಗಳು ನಡೆಯುತ್ತಿರಲಿ ಎಂದು ನಾರಾಯಣಗುರು ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.
ಅವರು ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಟನೆ ವತಿಯಿಂದ ನಡೆದ 40 ಗಜಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯರಾದ ಗಣಪತಿ ಎಂ., ವಾರ್ಡ್ ಸದಸ್ಯರಾದ ಶುಭಧರ ಶೆಟ್ಟಿ, ಸಂಘಟನೆಯ ಗೌರವ ಸಲಹೆಗಾರರಾದ ಬಲ್ಲಾಡಿ ಚಂದ್ರಶೇಖರ ಭಟ್, ಹಿರಿಯ ದಾನಿಗಳಾದ ಪದ್ಮಾವತಿ ಶೆಟ್ಟಿಗಾರ್ ಪಾಲ್ಗೊಂಡು ಶುಭ ಹಾರೈಸಿದರು.ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ, ಕಾರ್ಯದರ್ಶಿಗಳಾದ ಮನೋಜ್ ಪೂಜಾರಿ, ಸಂಘಟನೆಯ ಸರ್ವಸದಸ್ಯರು ಉಪಸ್ಥಿತರಿದ್ದರು ಕೋಶಾಧಿಕಾರಿ ಸತೀಶ್ ಪೂಜಾರಿ ಸ್ವಾಗತಿಸಿದರು.ಬಲ್ಲಾಡಿ ಶ್ರೀನಾಥ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



































