
ಹೆಬ್ರಿ : ಶ್ರೀ ಜನಾರ್ದನ ವಿದ್ಯಾಮಂದಿರ ಎಳ್ಳಾರೆ ಮತ್ತು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ” ಪಾದಪಂಕಜಂ” ಕುಣಿತ ಭಜನಾ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಹಿಂದಿ ಭಾಷಾ ಶಿಕ್ಷಕಿ ಪ್ರೇಮಲತಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶ್ರೀನಿವಾಸ ಪೂಜಾರಿ ಯರ್ಲಪಾಡಿ ಮತ್ತು ವಿದ್ಯಾರ್ಥಿಗಳನ್ನು ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಸ್ಥೆ ಶಕುಂತಲಾ ಅಭಿನಂದಿಸಿದ್ದಾರೆ.



































