
ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಮೃತಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈಯವರಿಂದ ಮುಕ್ತ ಸಂವಾದ ಕಾರ್ಯಕ್ರಮ ನಡೆಸಿ ಮಾತನಾಡಿ, ಪರೀಕ್ಷೆಯ ಭಯ ಹೋಗಲಾಡಿಸಲು ನಿರಂತರ ಅಧ್ಯಯನ, ನಿರಂತರ ಅಧ್ಯಯನಕ್ಕೆ ಏಕಾಗ್ರತೆ, ಏಕಾಗ್ರತೆಗೆ ಆರೋಗ್ಯ, ಆರೋಗ್ಯಕ್ಕೆ ಪ್ರಾಣಾಯಾಮ ಮುಖ್ಯ, ಪ್ರತಿನಿತ್ಯ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಶಿಕ್ಷಕರಾದ ಮಹೇಶ್ ಹೈಕಾಡಿ, ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




































