ಹೆಬ್ರಿ ಗಿಲ್ಲಾಳಿ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಸಹಸ್ರ ದೀಪೋತ್ಸವ ಮತ್ತು ಚಕ್ರಾಬ್ಜ ಮಂಡಲ ಪೂಜೆ

Date:

spot_img

ಹೆಬ್ರಿ : ನಾವು ಒಂದು ದೇವಸ್ಥಾನಕ್ಕೆ ತೆರಳಿದರೆ ಅಲ್ಲಿ ಇರುವ ದೇವರನ್ನು ಕಾಣಬಹುದು. ಆದರೆ ಗೋಶಾಲೆಯ ಒಂದೊಂದು ಗೋವುಗಳಲ್ಲಿ 33 ಕೋಟಿ ದೇವರ ಸನ್ನಿಧಾನ ಇದೆ. ನೂರಾರು ಗೋವುಗಳ ಮಧ್ಯೆ ಇದ್ದು ದೀಪೋತ್ಸವ ಆಚರಿಸಿದರೆ ಅನಂತ ಫಲ ನಮಗೆ ಸಿಗುವುದು. ಆದ್ದರಿಂದ ಗೋವುಗಳ ಆಂತರ್ಯಾಮಿ ಗೋಪಾಲಕೃಷ್ಣ ನಮ್ಮನ್ನೆಲ್ಲ ಅನುಗ್ರಹಿಸಲಿ ಎಂದು ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಗಿಲ್ಲಾಳಿ ವಿಶ್ವೇಶ್ವಕೃಷ್ಣ ಗೋಶಾಲೆಯಲ್ಲಿ ನಡೆದ ಕಾರ್ತಿಕ ಸಹಸ್ರ ದೀಪೋತ್ಸವದಲ್ಲಿ ಪಾಲ್ಗೊಂಡು ಶ್ರೀ ಕೃಷ್ಣನ ತೊಟ್ಟಿಲು ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.

ಇದೇ ಸಂದರ್ಭದಲ್ಲಿ ಮುದ್ರಾಡಿ ಉಪ್ಪಳ ಕೀರ್ತಿಶೇಷ ಮರಿಯಪ್ಪ ಕಲ್ಕೂರ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಪತ್ನಿ ನಾಗವೇಣಿಯ ಸ್ಮರಣಾರ್ಥವಾಗಿ ಅವರ ಪುತ್ರ ಎಂ. ರಾಘವೇಂದ್ರ ಕಲ್ಕೂರ್ ಗಿಲ್ಲಾಳಿ ಗೋಶಾಲೆಗೆ 1 ಲಕ್ಷ ರೂ. ದೇಣಿಗೆಯ ಚೆಕ್ ನ್ನು ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ರೆಂಜಾಳ ವಿದ್ವಾನ್ ಗುರುರಾಜ ಉಪಾಧ್ಯಾಯ ಹಾಗೂ ಅರ್ಚಕ ವೃಂದದವರು ನಡೆಸಿಕೊಟ್ಟರು.

ಗೋಶಾಲೆಯ ಟ್ರಸ್ಟಿಗಳಾದ ವಿಷ್ಣುಮೂರ್ತಿ ಆಚಾರ್ಯ, ಲಕ್ಷ್ಮಣ ಭಟ್, ವಿಷ್ಣುಮೂರ್ತಿ ನಾಯಕ್, ಶ್ರೀಕಾಂತ್ ಭಟ್ ಅಜೆಕಾರು ಹಾಗೂ ಸಮಸ್ತ ಗೋಭಕ್ತರು ಉಪಸ್ಥಿತರಿದ್ದರು.ಹೆಬ್ರಿ ನಿತ್ಯಾನಂದ ಭಟ್ ಮತ್ತು ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಗಿಲ್ಲಾಳಿ ಅರ್ಧನಾರೀಶ್ವರ ಭಜನಾ ಮಂಡಳಿ ಹಾಗೂ ಸಮಸ್ತ ಗೊಭಕ್ತರ ನೆರವಿನಿಂದ ಕಾರ್ಯಕ್ರಮ ಸಂಪನ್ನಗೊಂಡಿತು. ವಿದ್ವಾನ್ ನಕ್ರೆ ರವಿಕುಮಾರ್ ಆಚಾರ್ಯ ಚಕ್ರಾಬ್ಜ ಮಂಡಲ ಪೂಜೆಯ ಆರಾಧನೆಯ ವಿಶೇಷತೆ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.ಗೋಶಾಲೆಯ ಟ್ರಸ್ಟಿಗಳಾದ ವಿದ್ವಾನ್ ಪದ್ಮನಾಭ ಆಚಾರ್ಯ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ