ಹೆಬ್ರಿಯ ಇಂದಿರಾನಗರದಲ್ಲಿ ಕೊರಗಜ್ಜನ ಹರಕೆಯ ನೇಮೋತ್ಸವ: ಭಕ್ತ ಸಾಗರ ನಿರೀಕ್ಷೆ

Date:

spot_img

ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಇಂದಿರಾನಗರದ ಎಂಬಲ್ಲಿ ನೆಲೆಸಿರುವ ಕಾರಣಿಕ ಶಕ್ತಿ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಇದೇ ಡಿಸೆಂಬರ್ 27, 2025ರ ಶನಿವಾರದಂದು ಅದ್ದೂರಿ ಹರಕೆಯ ಕೋಲ ಸೇವೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕ್ಷೇತ್ರದ ಆರಾಧಕರಾದ ಸಂತೋಷ್ ಹೆಬ್ರಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಧಾರ್ಮಿಕ ಉತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕರಾವಳಿಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ದಿನದಂದು ಭಜನಾ ಸಂಕೀರ್ತನೆ, ಮಹಾಪೂಜೆ ಹಾಗೂ ದೈವದ ಕೋಲದ ಮೂಲಕ ಭಕ್ತರ ಕಷ್ಟ-ಕಾರ್ಪಣ್ಯಗಳಿಗೆ ದೈವವು ಅಭಯ ನೀಡಲಿದೆ.

ಕಾರ್ಯಕ್ರಮದ ಸಮಯ ಮತ್ತು ವಿವರ:

  • ಸಂಜೆ 6:00 ರಿಂದ 8:00: ಸ್ಥಳೀಯ ಭಜನಾ ಮಂಡಳಿಗಳಿಂದ ಭಕ್ತಿ ರಸಮಂಜರಿ ಮತ್ತು ಭಜನಾ ಸೇವೆ ನಡೆಯಲಿದೆ.
  • ರಾತ್ರಿ 8:10: ಸ್ವಾಮಿ ಕೊರಗಜ್ಜನಿಗೆ ವಿಶೇಷ ಮಹಾಪೂಜೆ ನೆರವೇರಲಿದ್ದು, ತದನಂತರ ಭಕ್ತರಿಗೆ ಗಂಧ-ಪ್ರಸಾದ ವಿತರಣೆ ಮಾಡಲಾಗುವುದು.
  • ರಾತ್ರಿ 8:30: ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಆರಂಭವಾಗಲಿದ್ದು, ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ.
  • ರಾತ್ರಿ 9:00: ‘ಸ್ವಾಮಿ ಕೊರಗಜ್ಜ ಕೋಲ ಸೇವೆ’ ಆರಂಭವಾಗಲಿದೆ.

ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಜ್ಜನ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯು ಪ್ರಕಟಣೆಯಲ್ಲಿ ವಿನಂತಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.