ಶಿವಪುರದಲ್ಲಿ ಅನಾರೋಗ್ಯದಿಂದ ನೊಂದು 83 ವರ್ಷದ ವೃದ್ಧ ಆತ್ಮಹತ್ಯೆಗೆ ಶರಣು !

Date:

spot_img
suiside11

ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಹಿರಿಯ ನಾಗರಿಕರೊಬ್ಬರು ತೀವ್ರ ಅನಾರೋಗ್ಯದ ಕಾರಣದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ನಿವಾಸಿಯಾದ ಪೂವಪ್ಪ ಪೂಜಾರಿ (83) ಎಂಬುವವರೇ ಮೃತಪಟ್ಟ ದುರ್ದೈವಿ.

ಮೃತ ಪೂವಪ್ಪ ಪೂಜಾರಿ ಅವರು ಕಳೆದ ದೀರ್ಘಕಾಲದಿಂದ ಶ್ವಾಸಕೋಶದ ತೊಂದರೆ, ರಕ್ತದೊತ್ತಡ (BP) ಹಾಗೂ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದರು. ವಿಪರೀತ ಧೂಮಪಾನದ ಹವ್ಯಾಸ ಹೊಂದಿದ್ದ ಇವರಿಗೆ ಕುಟುಂಬಸ್ಥರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಸಹ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ಅನಾರೋಗ್ಯದ ಬಾಧೆ ತಡೆಯಲಾರದೆ ತೀವ್ರವಾಗಿ ನೊಂದಿದ್ದ ಅವರು, ಫೆಬ್ರವರಿ 26 ರಂದು ಸಂಜೆ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.